ನವದೆಹಲಿ: ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮಧ್ಯೆ ಕೊನೆಗೂ ಸೀಟು ಹಂಚಿಕೆ ಅಂತಿಮಗೊಂಡಿದೆ. ಲೋಕಸಭೆ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎರಡೂ ಪಕ್ಷ ಮೂರು ಸ್ಥಾನಗಳಲ್ಲಿ ಸ್ಪರ್ಧಿಸಲು ತೀರ್ಮಾನವಾಗಿದೆ.
ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಉಮರ್ ಅಬ್ದುಲ್ಲಾ , ಉಧಂಪುರ, ಜಮ್ಮು ಮತ್ತು ಲಡಾಖ್ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಲಿದ್ದು, ಅನಂತನಾಗ್, ಶ್ರೀನಗರ ಮತ್ತು ಬಾರಾಮುಲ್ಲಾದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದರು.
ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ನ ಜನರ ಆಕಾಂಕ್ಷೆಗಳನ್ನು ಪೂರೈಸಲು ಮತ್ತು ಸಂಸತ್ತಿನಲ್ಲಿ ಅವರನ್ನು ನಿಜವಾಗಿಯೂ ಪ್ರತಿನಿಧಿಸಲು ಸಹಾಯ ಮಾಡಲು ಇಂಡಿಯಾ ಮೈತ್ರಿಕೂಟ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ” ಎಂದು ಅವರು ಹೇಳಿದರು.
ಕಾಂಗ್ರೆಸ್ ಮತ್ತು ಎನ್‌ಸಿ ನಾಯಕರ ನಡುವೆ ಸಮಾಲೋಚನೆಯ ನಂತರ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಲಾಗಿದೆ.
ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮಾಯಕ ಸಲ್ಮಾನ್ ಖುರ್ಷಿದ್ ಕೂಡ ಉಪಸ್ಥಿತರಿದ್ದರು.