ಪ್ರಣಾಳಿಕೆಯಲ್ಲಿ ಸಿಎಎ ಉಲ್ಲೇಖ ಮಾಡದ ಕಾಂಗ್ರೆಸ್‌: ಪಿಣರಾಯನ್ ಕಿಡಿ

Prasthutha|

ಕೊಲ್ಲಂ: 2024ರ ಲೋಕಸಭಾ ಪ್ರಣಾಳಿಕೆಯಲ್ಲಿ ಸಿಎಎ ಬಗ್ಗೆ ಯಾವುದೇ ಉಲ್ಲೇಖ ಕಾಂಗ್ರಸ್ ಮಾಡಿಲ್ಲ. CAA ಉಲ್ಲೇಖಿಸಲು ಕಾಂಗ್ರೆಸ್‌ಗೆ ಭಯ ಎಂದು ಕಾಂಗ್ರೆಸ್‌ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ಕಿಡಿಗಾರಿದ್ದಾರೆ.

- Advertisement -

ಕೇರಳದ ಕೊಲ್ಲಂನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇರಳ ಸಿಎಂ, 2024ರ ಲೋಕಸಭಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಬಗ್ಗೆ ಯಾವುದೇ ಉಲ್ಲೇಖ ಮಾಡಿಲ್ಲ. ವಿವಾದಾತ್ಮಕ ವಿಷಯಗಳ ಬಗ್ಗೆ ಪ್ರಸ್ತಾಪಿಸಲು ಕಾಂಗ್ರೆಸ್‌ಗೆ ಇರುವ ಭಯವನ್ನು ಇದು ತೋರಿಸುತ್ತದೆ ಎಂದಿದ್ದಾರೆ.

ಅಧಿಕಾರಕ್ಕೆ ಬಂದರೆ ಜಿಎಸ್‌ಟಿ ಸೇರಿ ಸಂವಿಧಾನವನ್ನು ಉಲ್ಲಂಘಿಸಿ ಜಾರಿಗೆ ತರಲಾದ ಹಲವು ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ. ಆದರೆ ಸಿಎಎ ಬಗ್ಗೆ ಒಂದು ಶಬ್ದವನ್ನೂ ಉಲ್ಲೇಖಿಸಿಲ್ಲ ಎಂದಿದ್ದಾರೆ.

- Advertisement -

ಸಿಎಎಯು ಸಂವಿಧಾನದ 14ನೇ ಪರಿಚ್ಛೇದವನ್ನು ಉಲ್ಲಂಘಿಸುತ್ತದೆ. ಆದರೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ 14ನೇ ಪರಿಚ್ಛೇದದ ಉಲ್ಲೇಖವೇ ಇಲ್ಲ ಎಂದು ಕಾಂಗ್ರೆಸ್ ನಡೆಯನ್ನು ಪಿಣರಾಯಿ ವಿಜಯನ್ ಟೀಕಿಸಿದ್ದಾರೆ.

ಕಾರ್ಮಿಕರು, ರೈತರು, ಕ್ರಿಮಿನಲ್ ನ್ಯಾಯ, ಪರಿಸರ, ಅರಣ್ಯ ಮತ್ತು ಡಿಜಿಟಲ್ ದತ್ತಾಂಶ ರಕ್ಷಣೆ ಮುಂತಾದ ಜನವಿರೋಧಿ ಕಾನೂನುಗಳನ್ನು ರದ್ದು ಮಾಡುವುದಾಗಿ ಕಾಂಗ್ರೆಸ್ ನೀಡಿದ ಭರವಸೆಗೆ ನಮ್ಮ ಬೆಂಬಲವಿದೆ ಎಂದು ಅವರು ಹೇಳಿದ್ದಾರೆ.



Join Whatsapp