ಕಾಂಗ್ರೆಸ್‌ ಕಚೇರಿ ಧ್ವಂಸ| 10 ಮಂದಿ ಬಜರಂಗದಳ ಕಾರ್ಯಕರ್ತರ ಬಂಧನ

Prasthutha|

ಜಬಲ್ಪುರ್‌: ಕಾಂಗ್ರೆಸ್‌ ಕಚೇರಿ ಧ್ವಂಸಗೊಳಿಸಿದ 10 ಮಂದಿ ಬಜರಂಗದಳ ಕಾರ್ಯಕರ್ತರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

- Advertisement -

ಕಿಡಿಗೇಡಿಗಳು ಮಧ್ಯಪ್ರದೇಶದ ಜಬಲ್ಪುರ ನಗರದ ಬಲ್ದಿಯೋ ಬಾಗ್‌ ಪ್ರದೇಶದಲ್ಲಿರುವ ಕಾಂಗ್ರೆಸ್‌ ಕಚೇರಿಗೆ ನುಗ್ಗಿ, ವಸ್ತುಗಳನ್ನು ಧ್ವಂಸಗೊಳಿಸಿದ್ದರು.

ಕರ್ನಾಟಕ ಚುನಾವಣೆ ಹಿನ್ನೆಲೆಯಲ್ಲಿ ಬಜರಂಗದಳ ನಿಷೇಧಿಸುವುದಾಗಿ ಹೇಳಿದ್ದ ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯನ್ನು ವಿರೋಧಿಸಿ ಜಬಲ್ಪುರದಲ್ಲಿ ಬಲಪಂಥೀಯ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

- Advertisement -

ಈ ವೇಳೆ ಕೆಲ ಕಿಡಿಗೇಡಿಗಳು ಕಾಂಗ್ರೆಸ್‌ ಕಚೇರಿಗೆ ನುಗ್ಗಿ, ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ 25 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಇದುವರೆಗೂ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.