Home ಟಾಪ್ ಸುದ್ದಿಗಳು ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ: 27 ಬಿಜೆಪಿ ಕಾರ್ಯಕರ್ತರ ಮೇಲೆ FIR

ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ: 27 ಬಿಜೆಪಿ ಕಾರ್ಯಕರ್ತರ ಮೇಲೆ FIR

ಬೆಳಗಾವಿ: ಇಲ್ಲಿನ ಕಾಂಗ್ರೆಸ್‌ ಕಚೇರಿಗೆ ಬುಧವಾರ ಮುತ್ತಿಗೆ ಹಾಕಿದ ಬಿಜೆಪಿಯ 27 ಕಾರ್ಯಕರ್ತರ ಮೇಲೆ FIR ದಾಖಲಿಸಲಾಗಿದೆ.ಐಪಿಸಿ ಸೆಕ್ಷನ್ 143, 147, 341, 283, 448 ಹಾಗೂ 149 ಅಡಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯಕ್ಕೆ ಅನುದಾನ ಬಿಡುಗಡೆಗೊಳಿಸುವಲ್ಲಿ ಕೇಂದ್ರ ಸರ್ಕಾರದಿಂದ ಅನ್ಯಾಯವಾಗಿದೆ ಎಂದು ಕಾಂಗ್ರೆಸ್‌ ನಾಯಕರು ಬುಧವಾರ ದೆಹಲಿಯಲ್ಲಿ ನಡಸಿದ ಪ್ರತಿಭಟನೆಯನ್ನು ವಿರೋಧಿಸಿ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದ್ದರು.

ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಕಾಂಗ್ರೆಸ್‌ ಕಚೇರಿಗೆ ನುಗ್ಗಿದ ಕಾರ್ಯಕರ್ತರು ಗೇಟ್‌ ತೆರೆದು ಒಳಹೋಗಲು ಯತ್ನಿಸಿದರು. ಆಗ ಪೊಲೀಸರು ತಡೆದರು. ಈ ಗದ್ದಲದಿಂದ ವೃತ್ತದಲ್ಲಿ ಸಂಚಾರ ದಟ್ಟಣೆ ಉಂಟಾಗಿ ಜನರಿಗೆ ತೊಂದರೆ ಆಗಿದೆ ಎಂದು FIRನಲ್ಲಿ ಉಲ್ಲೇಖಿಸಲಾಗಿದೆ.

ಪಕ್ಷದ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷೆ ಗೀತಾ ಸುತಾರ್, ಜಿಲ್ಲಾ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ್ ಪಾಟೀಲ, ಪ್ರಧಾನ ಕಾರ್ಯದರ್ಶಿ ಮುರಗೇಂದ್ರಗೌಡ ಪಾಟೀಲ ಸೇರಿ 27 ಮಂದಿ ಹೆಸರು FIRನಲ್ಲಿದೆ.

Join Whatsapp
Exit mobile version