Home Uncategorized ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್’ನಿಂದ ಆಹೋರಾತ್ರಿ ಧರಣಿ: ಸಿಎಂ ಬೊಮ್ಮಾಯಿ, ಬಿಎಸ್’ವೈ ಮನವೊಲಿಕೆ ಯತ್ನ...

ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್’ನಿಂದ ಆಹೋರಾತ್ರಿ ಧರಣಿ: ಸಿಎಂ ಬೊಮ್ಮಾಯಿ, ಬಿಎಸ್’ವೈ ಮನವೊಲಿಕೆ ಯತ್ನ ವಿಫಲ

ಬೆಂಗಳೂರು: ಭವಿಷ್ಯದಲ್ಲಿ ನವದೆಹಲಿಯ ಕೆಂಪುಕೋಟೆಯ ಮೇಲೆ ರಾಷ್ಟ್ರಧ್ವಜದ ಬದಲಿಗೆ ಕೇಸರಿ ಧ್ವಜ ಹಾರಿಸಲಾಗುವುದು ಎಂದು ಹೇಳಿಕೆ ನೀಡಿದ್ದ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಉಭಯ ಸದನಗಳಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಆಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ
ಕಾಂಗ್ರೆಸ್ ನಾಯಕರ ಮನವೊಲಿಸಲು ಧರಣಿ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರಾದರೂ ಪ್ರತಿಪಕ್ಷ ತನ್ನ ಪಟ್ಟು ಸಡಿಲಿಸಿಲ್ಲ. ರಾತ್ರಿಯಿಡೀ ಸದನದಲ್ಲಿ ಧರಣಿ ಕೂರಲು ಕೈ ಶಾಸಕರು ನಿರ್ಧರಿಸಿದ್ದಾರೆ.

ಈಶ್ವರಪ್ಪ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಿಎಂ ಬೊಮ್ಮಾಯಿ

ಸಚಿವ ಕೆ.ಎಸ್. ಈಶ್ವರಪ್ಪನವರ ರಾಷ್ಟ್ರಧ್ವಜ ಕುರಿತಾದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಈಶ್ವರಪ್ಪನವರ ಹೇಳಿಕೆಯಲ್ಲಿ ತಪ್ಪಿಲ್ಲ. ಅವರ ಹೇಳಿಕೆಯಲ್ಲಿ ಯಾವುದೇ ಕಾನೂನು ವಿರೋಧಿ ಅಂಶಗಳಿಲ್ಲ. ಜವಾಬ್ದಾರಿ ಮರೆತಿರುವ ವಿರೋಧಪಕ್ಷ ಅಹೋರಾತ್ರಿ ಧರಣಿ ಮಾಡುವುದು ವಿಧಾನಸಭೆಯಲ್ಲಿ ಹಲವಾರು ಬಾರಿ ಆಗಿದೆ ಎಂದರು.

Join Whatsapp
Exit mobile version