ದೇಶದಲ್ಲಿ ಮೊದಲು ಕಾಂಗ್ರೆಸ್ ಪಕ್ಷವನ್ನು ನಿಷೇಧಿಸಬೇಕು: ನಳಿನ್ ಕುಮಾರ್ ಕಟೀಲ್

Prasthutha|

ಬೆಂಗಳೂರು: ‘ದೇಶದಲ್ಲಿ ಪಿಎಫ್ ಐ, ಎಸ್ ಡಿಪಿಐ ಸಂಘಟನೆಗಳಿಗೆ ಕಾಂಗ್ರೆಸ್ ಬೆಂಬಲ ಕೊಟ್ಟಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಮೊದಲು ನಿಷೇಧಿಸಬೇಕು. ಸ್ವಾತಂತ್ರ್ಯಾ ನಂತರದ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ದೇಶದಲ್ಲಿ ಆಡಳಿತ ಮಾಡಿದರೆ ಈ ದೇಶ ಹಾಳಾಗುತ್ತದೆ ಎಂದು ಗಾಂಧೀಜಿಯವರಿಗೆ ತಿಳಿದಿತ್ತು. ಆದ್ದರಿಂದಲೇ ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜನೆ ಮಾಡಲಿ ಎಂದು ಮಹಾತ್ಮಾ ಗಾಂಧಿ ಹೇಳಿದ್ದರು ಎಂದು ಕಾಂಗ್ರೆಸ್ ವಿರುದ್ಧ ಎಂದು ವಾಗ್ದಾಳಿ ನಡೆಸಿದರು.

- Advertisement -


‘ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭಯ ಪಡುವುದು ಯಾಕೆ? ತಪ್ಪು ಮಾಡಿಲ್ಲ ಎಂದಾದರೆ ಸಿಬಿಐ ಅಧಿಕಾರಿಗಳಿಗೆ ಧೈರ್ಯದಿಂದ ಉತ್ತರ ಕೊಡಲಿ ಎಂದು ನಳಿನ್ ಕುಮಾರ್ ಹೇಳಿದರು.

Join Whatsapp