ಕಲಬುರಗಿ: ‘ವಿಧಾನ ಪರಿಷತ್ ಚುನಾವಣೆಯಲ್ಲಿ ಯಾರಾದರೂ ಬಂಡಾಯ ಅಭ್ಯರ್ಥಿಗಳು ಸ್ಪರ್ಧಿಸಿದರೆ ಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರವೇ ಬಿಡುಗಡೆ ಮಾಡುತ್ತೇವೆ. 20 ಕ್ಷೇತ್ರಗಳಲ್ಲಿಯೂ ನಮ್ಮ ಅಭ್ಯರ್ಥಿಗಳು ನಿಲ್ಲುತ್ತಾರೆ. ಯಾರಾದರೂ ಬಂಡಾಯ ಅಭ್ಯರ್ಥಿಗಳು ಸ್ಪರ್ಧೆ ಮಾಡಿದರೆ ಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸುತ್ತೇವೆ ಎಂದು ಹೇಳಿದರು.
‘ಕಾಂಗ್ರೆಸ್ಸಿನಲ್ಲಿ ಯಾವುದೇ ಬಣಗಳಿಲ್ಲ. ಇರುವುದು ಕಾಂಗ್ರೆಸ್ ಒಂದೇ. ಬಿಜೆಪಿ ಮುಖಂಡರಿಗೆ ನಮ್ಮ ಬಗ್ಗೆ ಮಾತನಾಡದಿದ್ದರೆ ನಿದ್ದೆ ಬರುವುದಿಲ್ಲ. ಹೀಗಾಗಿ ಪ್ರತಿನಿತ್ಯ ನಮ್ಮ ಬಗ್ಗೆ ಅವರೇ ಪ್ರಚಾರ ಮಾಡುತ್ತಾರೆ’ ಎಂದು ಡಿಕೆಶಿ ಬಿಜೆಪಿಯ ಕಾಲೆಳೆದಿದ್ದಾರೆ.