ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ 2ನೇ ಹಂತದ ಭಾರತ್ ಜೋಡೋ ಯಾತ್ರೆ ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ.
ಡಿಸೆಂಬರ್ ತಿಂಗಳಿಂದ ಫೆಬ್ರವರಿ ನಡುವೆ ಯಾವುದೇ ಸಮಯದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲೇ 2ನೇ ಹಂತದ ಭಾರತ್ ಜೋಡೊ ಮುಂದುವರಿಯಲಿದ್ದು, ಹೈಬ್ರಿಡ್ ಮೋಡ್ ನಲ್ಲಿ ನಡೆಯುವ ಸಾಧ್ಯತೆಯಿದೆ.