Home ಟಾಪ್ ಸುದ್ದಿಗಳು ವೇದಿಕೆಯ ಮೇಲೆ ಕುಸಿದುಬಿದ್ದ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ವೇದಿಕೆಯ ಮೇಲೆ ಕುಸಿದುಬಿದ್ದ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಜಮ್ಮು ಕಾಶ್ಮೀರದಲ್ಲಿ ನಡೆದ ಕಾರ್ಯಕ್ರಮವೊಂದರ ವೇದಿಕೆ ಮೇಲೆ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಸಿದುಬಿದ್ದಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟದ ಭಾಗವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮತದಾರರನ್ನು ಮನವೊಲಿಸಲು ಖರ್ಗೆ ಅವರು ಜಸ್ರೋಟಾ ಮತ್ತು ರಾಮನಗರದಲ್ಲಿ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಈ ವೇಳೆ ವೇದಿಕೆಯಲ್ಲೇ ಅವರು ಕುಸಿದುಬಿದ್ದಿದ್ದಾರೆ, ಅವರನ್ನು ಅಲ್ಲೇ ಪಕ್ಕದಲ್ಲಿದ್ದವರು ನೆಲಕ್ಕೆ ಬೀಳದಂತೆ ಹಿಡಿದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರು ಕಳೆದ ವಾರಾಂತ್ಯದಲ್ಲಿ ಜಮ್ಮುವಿನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದರು, ಆದರೆ ನಿರಂತರ ಪ್ರಯಾಣದಿಂದ ಉಂಟಾದ ಆಯಾಸದಿಂದಾಗಿ ಹರ್ಯಾಣದಲ್ಲಿ ಕಾಂಗ್ರೆಸ್ ರ್ಯಾಲಿಗಳಲ್ಲಿ ಭಾಗವಹಿಸಿರಲಿಲ್ಲ ಎಂದು ವರದಿಯಾಗಿದೆ.

Join Whatsapp
Exit mobile version