ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಮತ್ತೆ ಏರುಪೇರು: ತೀವ್ರ ನಿಗಾ

Prasthutha|

ನವದೆಹಲಿ: ಅನಾರೋಗ್ಯಕ್ಕೆ ತುತ್ತಾಗಿ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಮತ್ತೆ ಏರುಪೇರು ಕಂಡುಬಂದಿದ್ದು, ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ.

- Advertisement -


ಈ ಬಗ್ಗೆ ಪತ್ರಿಕಾ ಪ್ರಕಟನೆ ಬಿಡುಗಡೆಗೊಳಿಸಿರುವ ಕಾಂಗ್ರೆಸ್, ಜೂನ್ 12, 2022 ರ ಮಧ್ಯಾಹ್ನ ಕೋವಿಡ್ ಸೋಂಕಿನ ನಂತರ ಮೂಗಿನಿಂದ ತೀವ್ರ ರಕ್ತಸ್ರಾವವಾದಾಗ ಸೋನಿಯಾರನ್ನು ನವದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಇದೀಗ ಕೆಳಭಾಗದ ಮೂತ್ರನಾಳದಲ್ಲಿ ಪತ್ತೆಯಾದ ಶಿಲೀಂಧ್ರ ಸೋಂಕಿಗೆ ಮತ್ತು ಕೋವಿಡ್ ನಂತರದ ರೋಗಲಕ್ಷಣಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದೆ.

- Advertisement -


ಪ್ರಸ್ತುತ ಸೋನಿಯಾ ಗಾಂಧಿ ಅವರ ರೋಗ್ಯದಲ್ಲಿ ತೀವ್ರ ನಿಗಾ ಇರಿಸಲಾಗಿದ್ದು, ಚಿಕಿತ್ಸೆ ಮುಂದುವರೆಯುತ್ತಿದೆ ಎಂದು ಹೇಳಿದೆ.

Join Whatsapp