ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಮತ ಚಲಾಯಿಸಿದ ಸೋನಿಯಾ, ಪ್ರಿಯಾಂಕಾ, ಖರ್ಗೆ

Prasthutha|

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಮತದಾನ ನಡೆಯುತ್ತಿದ್ದು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪ್ರಧಾನ ಕಾರ್ಯ ದರ್ಶಿ ಪ್ರಿಯಾಂಕಾ ಗಾಂಧಿ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮತ ಚಲಾಯಿಸಿದ್ದಾರೆ.

- Advertisement -


ಬೆಳಿಗ್ಗೆ 10:30ರ ಸುಮಾರಿಗೆ ಆಗಮಿಸಿದ ಸೋನಿಯಾ ಮತ್ತು ಪ್ರಿಯಾಂಕಾ ತಮ್ಮ ಅಧಿಕಾರ ಚಲಾಯಿಸಿದರು.

- Advertisement -


ಬೆಂಗಳೂರಿನ ಮತಕೇಂದ್ರದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಮಲ್ಲಿಕಾರ್ಜುನ ಖರ್ಗೆ ಮತದಾನ ಮಾಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಹ ಮತದಾನ ಮಾಡಿದ್ದಾರೆ.

Join Whatsapp