ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ: ಕಾಂಗ್ರೆಸ್ ಭರವಸೆ

Prasthutha|

ಅಮರಾವತಿ: 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಮಂಗಳವಾರ ಭರವಸೆ ನೀಡಿದ್ದಾರೆ.

- Advertisement -

2014ರಲ್ಲಿ ಆಂಧ್ರಪ್ರದೇಶ ವಿಭಜನೆಯ ವೇಳೆ ಮಾಡಿದ ಭರವಸೆಯ ಜೊತೆಗೆ ಪಕ್ಷ ನಿಲ್ಲಲಿದೆ ಎಂದು ತಿಳಿಸಿದರು.

ಅಕ್ಟೋಬರ್ 18ರಂದು ಆಂಧ್ರಪ್ರದೇಶಕ್ಕೆ ಆಗಮಿಸಲಿರುವ ಪಕ್ಷದ ಮುಖಂಡ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ವ್ಯವಸ್ಥೆಗಳ ಪರಿಶೀಲನೆಯ ಬಳಿಕ ಅವರು ಕರ್ನೂಲ್’ನಲ್ಲಿ ಪಕ್ಷದ ಹಿರಿಯ ಮುಖಂಡರಾದ ಉಮ್ಮನ್ ಚಾಂಡಿ, ದಿಗ್ವಿಜಯ್ ಸಿಂಗ್ ಮತ್ತು ಇತರ ಹಿರಿಯ ನಾಯಕರ ಜೊತೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

- Advertisement -

2024ರ ಸಾರ್ವತ್ರಿಕ ಚುನಾವಣೆಯಲ್ಲಿ ಜನಾದೇಶ ಸಿಕ್ಕಿದರೆ ಮತ್ತು ಕಾಂಗ್ರೆಸ್ ಪಕ್ಷದವರು ಪ್ರಧಾನಿಯಾದರೆ ಆಂಧ್ರಪ್ರದೇಶಕ್ಕೆ ವಿಶೇಷ ವರ್ಗದ ಸ್ಥಾನಮಾನ ನೀಡಲಿದೆ ಎಂದು ಅವರು ಒತ್ತಿ ಹೇಳಿದರು.

ಈ ವೇಳೆ ಆಂಧ್ರಪ್ರದೇಶದ ಎಐಸಿಸಿ ಉಸ್ತುವಾರಿ ಉಮ್ಮನ್ ಚಾಂಡಿ, ಆಂಧ್ರಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶೈಲಜಾನಾಥ್, ಸಂಸದ ಉತ್ತಮ್ ಕುಮಾರ್ ರೆಡ್ಡಿ, ತುಳಸಿ ರೆಡ್ಡಿ, ಹರ್ಷಕುಮಾರ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.




Join Whatsapp