ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಿಂದ ನಾಳೆ ವಿಧಾನಸೌಧಕ್ಕೆ ‘ಎತ್ತಿನಗಾಡಿ ಚಲೋ’

Prasthutha|

ಬೆಂಗಳೂರು : ದೇಶದಾದ್ಯಂತ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲಕ ಜನಸಾಮಾನ್ಯರ ಜೀವನವನ್ನು ದುಸ್ಥಿತಿಯತ್ತ ದೂಡುತ್ತಿರುವ ಕೇಂದ್ರ ಬಿಜೆಪಿ ಸರಕಾರದ ನೀತಿಯನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಸೆ.13ರಂದು ಬೆಳಗ್ಗೆ 9 ಗಂಟೆಗೆ `ಎತ್ತಿನಗಾಡಿ ಚಲೋ’ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

- Advertisement -

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬೆಳಗ್ಗೆ 9 ಗಂಟೆಗೆ ಸದಾಶಿವನಗರ ನಿವಾಸದಿಂದ ವಿಧಾನಸೌಧಕ್ಕೆ ಎತ್ತಿನಗಾಡಿ ಮೂಲಕ ತೆರಳಲಿದ್ದಾರೆ. ಅದೇ ರೀತಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕುಮಾರಪಾರ್ಕ್ ನಿವಾಸದಿಂದ ವಿಧಾನಸೌಧಕ್ಕೆ ಎತ್ತಿನಗಾಡಿ ಮೂಲಕ ತೆರಳಿ ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.



Join Whatsapp