ಇಸ್ರೋ ಯೋಜನೆ ಗುಜರಾತ್ ಗೆ ಸ್ಥಳಾಂತರ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

Prasthutha|

ಬೆಂಗಳೂರು : ಕರ್ನಾಟಕದಲ್ಲಿರುವ ಇಸ್ರೋದ ಯೋಜನೆಗಳನ್ನು ಬೇರೆಡೆಗೆ ಸ್ಥಳಾಂತರಿಸುವ ಪ್ರಯತ್ನಗಳನ್ನು ಕೈ ಬಿಡಬೇಕು ಎಂದು ಆಗ್ರಹಿಸಿ NSUI ವತಿಯಿಂದ ನ್ಯೂ ಬಿಇಎಲ್ ರಸ್ತೆಯ ಇಸ್ರೋ ಸಂಸ್ಥೆ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.

- Advertisement -


ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಚಿವ ಕೃಷ್ಣಬೈರೇಗೌಡ, ಎನ್ಎಸ್ ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್, ಸ್ಥಳೀಯ ಮುಖಂಡರಾದ ಹನುಮಂತೇಗೌಡ, ಜಯಸಿಂಹ ಮತ್ತಿತರರು ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಹಿರಿಯರು ಸ್ಥಾಪಿಸಿದ ಇಸ್ರೋ ಸಂಸ್ಥೆ ಪ್ರತಿಷ್ಠಿತ ಸಂಶೋಧನಾ ಕೇಂದ್ರವಾಗಿದೆ. ಸುಮಾರು 15 ಸಾವಿರ ವಿಜ್ಞಾನಿಗಳು ಕೆಲಸ ಮಾಡುತ್ತಿ ದ್ದಾರೆ. ಬೆಂಗಳೂರು ಮಾಹಿತಿ ತಂತ್ರಜ್ಞಾನದ ಕೇಂದ್ರವಷ್ಟೇ ಅಲ್ಲ. ತಾಂತ್ರಿಕ ಅನ್ವೇಷಣೆಗಳ ಹಬ್ ಕೂಡ ಆಗಿದೆ ಎಂದರು.
ಇಸ್ರೋದಲ್ಲಿ ಮಾನವ ಸಹಿತ ವೈಮಾನಿಕ ಯಾನಕ್ಕೆ 2007ರಿಂದಲೂ ಸಂಶೋಧನಾ ಯೋಜನೆ ನಡೆಯುತ್ತಿದೆ. ಇದನ್ನು ಗುಜರಾತ್ ಗೆ ಸ್ಥಳಾಂತರಿಸಲು ಪ್ರಯತ್ನಗಳು ನಡೆದಿವೆ. ಅದರ ಭಾಗವಾಗಿ ಅಂತಿಮ ಹಂತದಲ್ಲಿರುವ ಯೋಜನೆಯ ಕಾರ್ಯಕ್ರಮಗಳಿಗೆ ತಡೆ ನೀಡಲಾಗಿದೆ ಎಂದು ಆರೋಪಿಸಿದರು.
ಇಸ್ರೋ ಸಂಸ್ಥೆಯ ಯೋಜನೆಯನ್ನು ಯಾವುದೇ ಕಾರಣಕ್ಕೂ ಸ್ಥಳಾಂತರ ಮಾಡಬಾರದು.

- Advertisement -

ಇದು ನಾಡಿನ ಸ್ವಾಭಿಮಾನದ ಪ್ರಶ್ನೆ. ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ. ನಾವಿಂದು ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ಒಂದು ವೇಳೆ ಕೇಂದ್ರ ಸರ್ಕಾರ ತನ್ನ ನಿಲುವನ್ನು ಬದಲಿಸದೆ ಇದ್ದರೆ ಕನ್ನಡ ಪರ ಸಂಘಟನೆಗಳು ಪಕ್ಷಾತೀತವಾಗಿ ಎಲ್ಲರೂ ಪ್ರತಿಭಟನೆ ನಡೆಸುತ್ತಾರೆ. ಇಂದು ನಮ್ಮ ವಿದ್ಯಾರ್ಥಿ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾದಾಗ ಅದಕ್ಕೆ ತಡೆ ನೀಡುವ ಪ್ರಯತ್ನವನ್ನು ಪೊಲೀಸರು ಮಾಡಿದ್ದಾರೆ. ಇಂತಹದಕ್ಕೆಲ್ಲಾ ನಾವು ಹೆದರುವುದಿಲ್ಲ. ನಮ್ಮನ್ನು ಬಂಧಿಸಿದರು ಜಗ್ಗುವುದಿಲ್ಲ ಎಂದು ಹೇಳಿದರು.


ಭಾರತದಲ್ಲಿ ಎಲ್ಲಿಯಾದರೂ ಕೆಲಸ ಮಾಡಲು ಸಿದ್ಧ ಎಂದು ಇಸ್ರೋ ಅಧ್ಯಕ್ಷ ಶಿವನ್ ಹೇಳಿದರು. ಕೂಡಲೇ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು. ಕರ್ನಾಟಕದಿಂದ ಯಾವುದೇ ಕಾರಣಕ್ಕೂ ಯೋಜನೆ ಸ್ಥಳಾಂತರವಾಗಬಾರದು. ತಾವು ಮುಖ್ಯಮಂತ್ರಿ ಹಾಗೂ ಪ್ರಧಾನಿಯವರಿಗೆ ಈಗಾಗಲೇ ಪತ್ರ ಬರೆದಿದ್ದು, ರಾಜ್ಯದ ಸಂಸದರು ಕೇಂದ್ರ ಸರ್ಕಾರದ ಮೇಲೆ ಈ ನಿಟ್ಟಿನಲ್ಲಿ ಒತ್ತಡ ಹೇರಬೇಕೆಂದು ಹೇಳಿದರು.

Join Whatsapp