ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಿಂದ ಪ್ರತಿಭಟನೆ

Prasthutha|

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮತ್ತು ಬೆಲೆ ಏರಿಕೆಯನ್ನು ವಿರೋಧಿಸಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತು ವಿರೋಧ ಪಕ್ಷದ ಸಂಸದರು ಸಂಸತ್ ಭವನದ ಗಾಂಧೀಜಿ ಪ್ರತಿಮೆಯ ಮುಂದೆ ಪ್ರತಿಭಟನೆ ನಡೆಸಿದರು.

- Advertisement -

ಜಿಎಸ್ ಟಿ ಹೆಚ್ಚಳದ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಾಜ್ಯಸಭೆಯ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಗಾಂಧಿ ಪ್ರತಿಮೆ ಮತ್ತು ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸುವುದಾಗಿ ಸೋಮವಾರ ಹೇಳಿದ್ದರು.

Join Whatsapp