ಪೊಲೀಸ್ ವೈಫಲ್ಯದ ವಿರುದ್ಧ ಎಸ್.ಪಿ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ

Prasthutha|

ಮಡಿಕೇರಿ: ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವ ಸಲುವಾಗಿ ಕೊಡಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದು ವಿಕೃತಿ ಮೆರೆಯಲು ಪೊಲೀಸರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕೊಡಗು ಎಸ್.ಪಿ ಕಚೇರಿ ಮುಂದೆ ಪ್ರತಿಭಟಿಸಿದರು.

- Advertisement -

ಬಿಜೆಪಿ ಹಾಗೂ ಸಂಘಪರಿವಾರದ ಕಾರ್ಯಕರ್ತರು ಕಾನೂನು ಉಲ್ಲಂಘಿಸಿ ಪ್ರತಿಭಟಿಸಿದ್ದಲ್ಲದೆ ವಿರೋಧ ಪಕ್ಷದ ನಾಯಕನ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ. ಈ ಘಟನೆ ಪೊಲೀಸರ ಕಣ್ಣೆದುರೇ ನಡೆದರೂ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲವೆಂದು ಕಾಂಗ್ರೆಸ್ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಮಾಜಿ ಮುಖ್ಯಂತ್ರಿಗಳಿಗೇ ರಕ್ಷಣೆ ಇಲ್ಲದಂತಾಗಿದೆ ಎಂದು ಆರೋಪಿಸಿದರು. ಮೊಟ್ಟೆ ಎಸೆದ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಘಟನೆಯನ್ನು ಖಂಡಿಸಿ ಆ. 26 ರಂದು ಕೊಡಗು ಎಸ್.ಪಿ ಕಚೇರಿ ಚಲೋ ಹೋರಾಟ ನಡೆಯಲಿದ್ದು, ರಾಜ್ಯವ್ಯಾಪಿ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಮುಖರು ತಿಳಿಸಿದರು.

- Advertisement -

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಮುಖಂಡರಾದ ಎ.ಎಸ್ ಪೊನ್ನಣ್ಣ, ವೀಣಾ ಅಚ್ಚಯ್ಯ, ಟಿ.ಪಿ ರಮೇಶ್, ಚಂದ್ರ ಮೌಳಿ, ಮಂಥರ್ ಗೌಡ, ಮುಹಮ್ಮದ್ ರಾಫಿ ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದರು.



Join Whatsapp