ಮಂಗಳೂರು | ಹಿಂಸೆಗೆ ತಿರುಗಿದ ಕಾಂಗ್ರೆಸ್ ಪ್ರತಿಭಟನೆ: ಬಸ್’ಗೆ ಕಲ್ಲು ತೂರಾಟ

Prasthutha|

ಮಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ (ಆ.19) ಮಂಗಳೂರಿನಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆ ಹಿಂಸಾಚಾರಕ್ಕೆ ತಿರುಗಿದೆ.

- Advertisement -


ಕಾಂಗ್ರೆಸ್ ಪ್ರತಿಭಟನೆ ವೇಳೆ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆದಿದೆ. ಮಂಗಳೂರಿನ ಲಾಲ್ ಭಾಗ್ ಜಂಕ್ಷನ್ ಬಳಿ ಘಟನೆ ನಡೆದಿದೆ.


ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಸಿಟಿ ಬಸ್ ಗೆ ಕಲ್ಲು ಎಸೆದಿದ್ದಾರೆ. ಪರಿಣಾಮ ಬಸ್ ನ ಎದುರಿನ ಗಾಜು ಸಂಪೂರ್ಣ ಪುಡಿಯಾಗಿದೆ.

- Advertisement -

ಜೋಕಟ್ಟೆಯಿಂದ ಸ್ಟೇಟ್ ಬ್ಯಾಂಕ್ ಗೆ ತೆರಳುತ್ತಿದ್ದ 2ಸಿ ನಂಬರ್ ನ ಬಸ್ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಜೋಕಟ್ಟೆಯ ನೌಫಾಲ್ ಎಂಬವರಿಗೆ ಸೇರಿದ್ದು ಎಂದು ತಿಳಿದುಬಂದಿದ್ದು. ಈತ ಬಿಜೆಪಿಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.


ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.

ಬಸ್ಸು ಚಾಲಕ, ನಿರ್ವಾಹಕನ ಆಕ್ರೋಶ

ಖಾಸಗಿ ಬಸ್ಸಿನ ಗಾಜು ಒಡೆದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಬಸ್ಸು ಚಾಲಕ, ನಿರ್ವಾಹಕರು ಈ ರೀತಿ ಬಸ್ಸಿನ ಗಾಜು ಒಡೆದ ಸಂದರ್ಭ ಪ್ರಯಾಣಿಕರಿಗೆ ತೊಂದರೆ ಆದರೆ ಹೊಣೆ ಯಾರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ, ಎಂ ಎಲ್ ಸಿ ಪ್ರಕಾಶ್ ರಾಥೋಡ್, ಮುಖಂಡರಾದ ರಮಾನಾಥ ರೈ, ಹರೀಶ್ ಕುಮಾರ್, ಐವನ್ ಡಿಸೋಜಾ, ಪದ್ಮರಾಜ್, ಶಕುಂತಳಾ ಶೆಟ್ಟಿ, ಅಶೋಕ್ ರೈ, ಇಬ್ರಾಹಿಮ್ ಕೋಡಿಜಾಲ್, ಮಿಥುನ್ ರೈ , ಪ್ರವೀಣ್ ಚಂದ್ರ ಆಳ್ವ, ಜಿ. ಎ. ಬಾವ, ಶಾಲೆಟ್ಫ ಪಿಂಟೋ, ಪ್ರತಿಭಾ ಕುಳಾಯಿ, ಎಂ.ಎಸ್. ಮುಹಮ್ಮದ್, ವಿಶ್ವಾಸ್ ಕುಮಾರ್ ದಾಸ್, ಅಪ್ಪಿ ಮೊದಲಾದವರು ಉಪಸ್ಥಿತರಿದ್ದರು.




Join Whatsapp