ತೀವ್ರ ಸ್ವರೂಪಕ್ಕೆ ತಿರುಗಿದ ಕಾಂಗ್ರೆಸ್ ಪ್ರತಿಭಟನೆ; ಮಹಿಳಾ ಕಾರ್ಯಕರ್ತರನ್ನು ಎಳೆದಾಡಿದ ಪೊಲೀಸರು

Prasthutha|

ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೆ ದಿನವಾದ ಇಂದೂ ಇ ಡಿ ವಿಚಾರಣೆಯನ್ನು ಎದುರಿಸಲು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಜರಾಗಿದ್ಧಾರೆ.

- Advertisement -

ಈ ವೇಳೆ ಇ ಡಿ ಕಚೇರಿಯ ಹೊರಗೆ ಕಾಂಗ್ರೆಸ್ ನ ಮಹಿಳಾ ನಾಯಕರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ರಾಹುಲ್ ಗಾಂಧಿಗೆ ತೊಂದರೆ ಕೊಡುವ ಉದ್ದೇಶದಿಂದ ವಿಚಾರಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿದ ಕಾರ್ಯಕರ್ತರು ಇ ಡಿ ಕಚೇರಿಯ ಮುಂಭಾಗದಲ್ಲಿ ಟಯರ್ ಗಳನ್ನು ಸುಟ್ಟು ಪ್ರತಿಭಟನೆ ನಡೆಸಿದರು.

ಪ್ರತಿಭಟನಾ ನಿರತ ಮಹಿಳಾ ಕಾರ್ಯಕರ್ತರನ್ನು ಪೊಲೀಸರು ಎಳೆದೊಯ್ಯುತ್ತಿರುವ ದೃಶ್ಯಾವಳಿಗಳು ಸಾಮಾಜಿಕ  ಜಾಲತಾಣದಾದ್ಯಂತ ಹರಿದಾಡುತ್ತಿದೆ.

- Advertisement -



Join Whatsapp