ಅಯೋಧ್ಯೆಯಲ್ಲಿ ಮೊದಲ ಬಾರಿಗೆ ಬೀಗ ತೆಗೆಸಿ ರಾಮನ ಪೂಜೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದೇ ರಾಜೀವ್ ಗಾಂಧಿ: ಕಾಂಗ್ರೆಸ್

Prasthutha|

- Advertisement -

ಕಾಂಗ್ರೆಸ್‌ ನಿಂದ ರಾಮ ಮಂದಿರಕ್ಕೆ ನೀಡಿದ ಕೊಡುಗೆ ಪಟ್ಟಿ ರಿಲೀಸ್‌

ಬೆಂಗಳೂರು: ನಾವು ಕೂಡ ರಾಮಭಕ್ತರೇ ರಾಮಮಂದಿರಕ್ಕೆ ನಮ್ಮದೂ ಕೊಡುಗೆ ಇದೆ. ರಾಮಮಂದಿರ ಬಾಗಿಲು ತೆಗೆಸಿದ್ದೇ ನಾವು. ಪೂಜೆ ಮಾಡಲು ಅವಕಾಶ ಕೊಟ್ಟಿದ್ದೆ ನಾವು ಎಂದು ಕಾಂಗ್ರೆಸ್ ಹೇಳಿದೆ.

- Advertisement -

ಈ ಸಂಬಂಧ ಕಾಂಗ್ರೆಸ್‌ ಸಾಮಾಜಿಕ ಜಾಲತಾಣದಲ್ಲಿ ದೀರ್ಘ ಪೋಸ್ಟ್‌ ಹಾಕಿ ರಾಮ ಮಂದಿರಕ್ಕೆ ಕಾಂಗ್ರೆಸ್ ನೀಡಿದ ಕೊಡುಗೆಯ ಪಟ್ಟಿಯನ್ನು ವಿವರಿಸಿದೆ.

ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ. ರಾಮರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿನಾಯಕರಾಗಿದ್ದರು. ನಾಥುರಾಮ್ ಗೂಡ್ಸೆ ಹಾರಿಸಿದ ಗುಂಡಿಗೆ ಎದೆ ಸೀಳಿ ಹುತಾತ್ಮರಾದಾಗ ಮಹಾತ್ಮ ಗಾಂಧೀಜಿ ಅವರು ಹೇಳಿದ ಕೊನೇ ಮಾತು ಹೇ ರಾಮ್! ಆಗ ಬಿಜೆಪಿ ಹುಟ್ಟೇ ಇರಲಿಲ್ಲ.

1985-86 ರಲ್ಲಿ ಅಯೋಧ್ಯೆಯಲ್ಲಿ ಮೊದಲ ಬಾರಿಗೆ ಬೀಗ ತೆಗೆಸಿ ರಾಮನ ಪೂಜೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದೇ ರಾಜೀವ್ ಗಾಂಧಿ. 1989ರಲ್ಲಿ ರಾಮ ಮಂದಿರ ಶಿಲಾನ್ಯಾಸಕ್ಕೆ ವಿಶ್ವ ಹಿಂದೂ ಪರಿಷತ್ ಗೆ ಅವಕಾಶ ಕಲ್ಪಿಸಿದವರು ರಾಜೀವ್ ಗಾಂಧಿ. ರಾಜೀವ್ ಗಾಂಧಿ ಅವರು ಮೊದಲ ಹೆಜ್ಜೆ ಇಡದೇ ಹೋಗಿದ್ದರೆ ಬಿಜೆಪಿಯವರಿಗೆ ಇದರ ಆಲೋಚನೆಯೇ ಬರುತ್ತಿರಲಿಲ್ಲ.

ದೂರದರ್ಶನದಲ್ಲಿ ರಾಮಾಯಣದ ಸೀರಿಯಲ್ ಪ್ರಸಾರ ಮಾಡಿ ಮನೆ, ಮನೆಯೂ ರಾಮಲಲ್ಲಾನನ್ನು ಕಣ್ಣು ತುಂಬಿಕೊಳ್ಳುವಂತೆ ಮಾಡಿದ್ದು ಕಾಂಗ್ರೆಸ್ ಸರ್ಕಾರ. ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ. ಆದರೆ ರಾಮನ ಹೆಸರು ಹೇಳಿಕೊಂಡೇ ರಾಜಕೀಯ ಆಶ್ರಯ ಹುಡುಕುವ ಬಿಜೆಪಿಗೆ ಸನ್ಮತಿ ದೇ ಭಗವಾನ್ ಎಂದು ಹೇಳಬೇಕಾಗಿ ಬಂದಿರುವುದು ದುರಂತ.



Join Whatsapp