ನವದೆಹಲಿ: ಸಂವಿಧಾನ ರಕ್ಷಣೆಗಾಗಿ ಸಮಾನ ಮನಸ್ಕ ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ಕೈಜೋಡಿಸಲು ಕಾಂಗ್ರೆಸ್ ಸಿದ್ಧವಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.
ನರೇಂದ್ರ ಮೋದಿ ಸರ್ಕಾರ ಪ್ರತಿಯೊಂದು ಸಾಂವಿಧಾನಿಕ ಸಂಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಪ್ರಧಾನಿ ಮೋದಿ ಮತ್ತು ಅವರ ಸರ್ಕಾರ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗವನ್ನು ವ್ಯವಸ್ಥಿತವಾಗಿ ಹಾನಿಗೊಳಿಸುತ್ತಿದೆ. ಅವರ ಕ್ರಮಗಳು ಪ್ರಜಾಪ್ರಭುತ್ವದ ಬಗ್ಗೆ “ಆಳವಾಗಿ ಬೇರೂರಿರುವ ತಿರಸ್ಕಾರ ಭಾವನೆಯನ್ನು ಇದು ತೋರಿಸುತ್ತಿದೆ ಎಂದು “ದಿ ಹಿಂದೂ” ಪತ್ರಿಕೆಗೆ ಬರೆದ ಲೇಖನದಲ್ಲಿ ಸೋನಿಯಾ ಗಾಂಧಿ ಹೇಳಿದ್ದಾರೆ.
ಬಿಜೆಪಿ ಮತ್ತು ಆರ್ ಎಸ್ಎಸ್ ನಾಯಕರಿಂದ ಹೆಚ್ಚುತ್ತಿರುವ ದ್ವೇಷ ಮತ್ತು ಹಿಂಸಾಚಾರವನ್ನು ಪ್ರಧಾನಿ ಮೋದಿ ನಿರ್ಲಕ್ಷಿಸಿದ್ದಾರೆ. ಅವರು ಒಮ್ಮೆಯೂ ಶಾಂತಿ ಅಥವಾ ಸೌಹಾರ್ದತೆಗಾಗಿ ಕರೆ ನೀಡಿಲ್ಲ ಅಥವಾ ಅಪರಾಧಿಗಳಿಗೆ ಶಿಕ್ಷೆಯಾಗಲು ಅವರು ಅವಕಾಶ ನೀಡಿಲ್ಲ ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷೆ ದೂರಿದ್ದಾರೆ.