ಮುಡಾಸ್ತ್ರಕ್ಕೆ ಕಾಂಗ್ರೆಸ್ ಕೊರೊನಾಸ್ತ್ರ: ಕ್ರಿಮಿನಲ್ ಕೇಸ್​ ದಾಖಲಿಸುವಂತೆ ಶಿಫಾರಸು

Prasthutha|

- Advertisement -

ಸಿಎಂ ಕೈ ಸೇರಿದ ತನಿಖಾ ಆಯೋಗದ ವರದಿ: ಬಿಜೆಪಿಗರಲ್ಲಿ ಢವಢವ

ಬೆಂಗಳೂರು: ಬಿಜೆಪಿ ಹೂಡಿರುವ ಮುಡಾಸ್ತ್ರಕ್ಕೆ ಕಾಂಗ್ರೆಸ್ ಕೊರೊನಾಸ್ತ್ರ ಹೂಡಿದೆ.

- Advertisement -

ಜಸ್ಟೀಸ್ ಜಾನ್ ಮೈಕೆಲ್ ಕುನ್ಹಾ ನೇತೃತ್ವದ ಆಯೋಗ, ಬಿಜೆಪಿ ಸರ್ಕಾರದಲ್ಲಿ ಕೊರೊನಾ ಹಗರಣದ ವರದಿಯನ್ನು ಸಿಎಂಗೆ ಸಲ್ಲಿಸಿದೆ.

ಕೊವಿಡ್​ ಅವಧಿಯಲ್ಲಿನ ಹಣದ ಖರ್ಚು-ವೆಚ್ಚದ ಸಂಪೂರ್ಣ ವರದಿ ಸಿಎಂ ಸಿದ್ದರಾಮಯ್ಯ ಕೈ ಸೇರಿದೆ. ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ಹಾ ನೇತೃತ್ವದಲ್ಲಿ ಸಿಎಂ ಕಾವೇರಿ ನಿವಾಸದಲ್ಲಿ ವರದಿ ಸಲ್ಲಿಸಲಾಗಿದೆ. ಬೃಹತ್ ಗಾತ್ರದ ಬಾಕ್ಸ್ ನಲ್ಲಿ ಒಟ್ಟು 1722ಪುಟಗಳ ಮಧ್ಯಂತರ ವರದಿಯನ್ನ ಸಲ್ಲಿಕೆ ಮಾಡಲಾಗಿದೆ. ಆಯೋಗವು ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಶಿಫಾರಸು ಮಾಡಿದೆ. ಮಧ್ಯಂತರ ವರದಿಯಲ್ಲಿ ಭ್ರಷ್ಟಾಚಾರ ನಡೆದಿರುವುದರ ಬಗ್ಗೆ ಉಲ್ಲೇಖಿಸಲಾಗಿದೆ.



Join Whatsapp