ಕಾಂಗ್ರೆಸ್ ಮತ್ತೊಂದು ಪಟ್ಟಿ ಬಿಡುಗಡೆ: ಕಂಗನಾ ರಣಾವತ್ ವಿರುದ್ಧ ವಿಕ್ರಮಾದಿತ್ಯ ಸಿಂಗ್ ಕಣಕ್ಕೆ

Prasthutha|

ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 16 ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ವಿಕ್ರಮಾದಿತ್ಯ ಸಿಂಗ್ ಅವರನ್ನು ಕಣಕ್ಕಿಳಿಸಿದೆ.

- Advertisement -

ಚಂಡೀಗಢದಿಂದ ಮನೀಶ್ ತಿವಾರಿಗೆ ಟಿಕೆಟ್ ನೀಡಲಾಗಿದೆ. ಇಲ್ಲಿನ ಹಾಲಿ ಸಂಸದ ಕಿರಣ್ ಖೇರ್ ಬದಲಿಗೆ ಸಂಜಯ್ ಟಂಡನ್ ಗೆ ಬಿಜೆಪಿ ಟಿಕೆಟ್ ನೀಡಿದೆ.

ಕಾಂಗ್ರೆಸ್ ಇದರೊಂದಿಗೆ ಇದರೊಂದಿಗೆ ಒಟ್ಟು 259 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದಂತಾಗಿದೆ. ಶನಿವಾರ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಹಿಮಾಚಲ ಪ್ರದೇಶ, ಹರಿಯಾಣ, ಪಂಜಾಬ್ ಮತ್ತು ದೆಹಲಿಯ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.



Join Whatsapp