ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಇಂದು (ಶನಿವಾರ) ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಈ ನಿರ್ಧಾರವನ್ನು ವಿರೋಧ ಪಕ್ಷದ ನಾಯಕ ಆರ್. ಅಶೋಕ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
‘ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ. ಅವೈಜ್ಞಾನಿಕ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ’ ಎಂದು ಆರೋಪಿಸಿದ್ದಾರೆ.
‘ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ ಮತ್ತು ಡೀಸೆಲ್ ಬೆಲೆ 3.50 ರೂ. ಹೆಚ್ಚಳ ಮಾಡಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ’ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ.
— R. Ashoka (ಮೋದಿ ಅವರ ಕುಟುಂಬ) (@RAshokaBJP) June 15, 2024
ಅವೈಜ್ಞಾನಿಕ ಗ್ಯಾರೆಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ @INCKarnataka ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ.
ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ… pic.twitter.com/JKUwZZcGKb