Home ಟಾಪ್ ಸುದ್ದಿಗಳು ಮತಕ್ಕಾಗಿ ದೇಶದ ಭದ್ರತೆ ಅಡ ಇಡುತ್ತಿರುವ ಕಾಂಗ್ರೆಸ್: ಬೊಮ್ಮಾಯಿ

ಮತಕ್ಕಾಗಿ ದೇಶದ ಭದ್ರತೆ ಅಡ ಇಡುತ್ತಿರುವ ಕಾಂಗ್ರೆಸ್: ಬೊಮ್ಮಾಯಿ

ಹುಬ್ಬಳ್ಳಿ: ಕೇವಲ ಮತಕ್ಕಾಗಿ ದೇಶದ ಭದ್ರತೆಯನ್ನು ಅಡ ಇಡುವಂತಹ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಮುಖ್ಯಮಂತ್ರಿ ಅವರು ಮತ ಬ್ಯಾಂಕ್ ಓಲೈಕೆ ರಾಜಕಾರಣದ ಮುಸುಕು ಹಾಕಿಕೊಂಡಿದ್ದಾರೆ. ಹೀಗಾಗಿ ಅವರಿಗೆ ಬೇರೆ ಏನೂ ಕಾಣಿಸುತ್ತಿಲ್ಲ ಎಂದು ಶಾಸಕ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ವಿಧಾನಸೌಧದ ಕಾರಿಡಾರ್ ನಲ್ಲಿ ವ್ಯಕ್ತಿಯೊಬ್ಬ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಆರೋಪಕ್ಕೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ದೇಶದ್ರೋಹಿಗಳಿಗೆ ಹೆಚ್ಚು ಪ್ರೋತ್ಸಾಹ ಸಿಗುತ್ತಿದ್ದು, ಅವರಿಗೆ ಧೈರ್ಯ ಬಂದಿದೆ ಎಂದು ಹೇಳಿದರು.
ವಿಧಾನಸೌಧಕ್ಕೆ ಬಂದು ದೇಶದ್ರೋಹದ ಘೋಷಣೆ ಕೂಗಲು ಈ ಸರ್ಕಾರ ನೀಡಿರುವ ಪ್ರೋತ್ಸಾಹ ಕಾರಣ. ನಮ್ಮ ಸರ್ಕಾರ ಇದ್ದಾಗ ಇಂತಹ ಶಕ್ತಿಗಳನ್ನು ಸದೆಬಡಿದಿದ್ದೆವು ಎಂದರು.

Join Whatsapp
Exit mobile version