ಶಿವಮೊಗ್ಗ: ಈ ಅವಧಿಗೆ ಮಾತ್ರವಲ್ಲ. ಮುಂದಿನ ಅವಧಿಯಲ್ಲೂ ಕಾಂಗ್ರೆಸ್ ಅಧಿಕಾರದಲ್ಲಿ ಇರಲಿದೆ. ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ. ಬಲಿಷ್ಠ ಕಾಂಗ್ರೆಸ್ ಸರಕಾರ ಈ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಏನೇ ಹೇಳಿದರೂ ಅದು ಸುಳ್ಳಾಗಿರುತ್ತದೆ ಎಂದರು.
ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಇದನ್ನು ನೋಡಿದ ಕಮಲ ಉದುರಿ ಹೋಯಿತು. ತೆನೆ ಹೊತ್ತ ಮಹಿಳೆ ತೆನೆ ಎಸೆದು ಹೋದಳು. ಕರ್ನಾಟಕ ಪ್ರಬುದ್ಧವಾಯಿತು. ಕರ್ನಾಟಕ ಸಮೃದ್ಧಿಯಾಯಿತು ಎಂದು ಡಿಸಿಎಂ ಹೇಳಿದರು.