ರಾಮ ಮಂದಿರ, ಮೋದಿ ಹೊಗಳಿದ್ದ ಆಚಾರ್ಯರನ್ನು ವಜಾಗೊಳಿಸಿದ ಕಾಂಗ್ರೆಸ್

Prasthutha|

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯನ್ನು ಹೊಗಳಿ ಕಾಂಗ್ರೆಸ್‌ ನಿಲುವನ್ನು ಟೀಕಿಸಿದ್ದ ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್‌ ಕೃಷ್ಣಂರನ್ನು ಪಕ್ಷ 6 ವರ್ಷದವರೆಗೆ ಉಚ್ಛಾಟಿಸಿದೆ.

- Advertisement -

ಪ್ರಮೋದ್‌ ಆಚಾರ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಂಡಾಡಿದ್ದರು.ಹಲವು ಕಾಂಗ್ರೆಸ್‌ ನಿಲುವಿಗೆ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಪಕ್ಷದಲ್ಲಿ ಅಶಿಸ್ತು ತೋರಿಸಿದ ಕಾರಣ ಅವರನ್ನು ಮುಂದಿನ 6 ವರ್ಷದವರೆಗೆ ವಜಾ ಮಾಡಲಾಗಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಹೇಳಿದ್ದಾರೆ. ಇವರು ಇತ್ತೀಚೆಗೆ ಉತ್ತರ ಪ್ರದೇಶದ ಕಲ್ಕಿ ದೇಗುಲ ಶಂಕುಸ್ಥಾಪನೆಗೆ ಪ್ರಧಾನಿ ಮೋದಿಯನ್ನು ಆಹ್ವಾನಿಸಿದ್ದರು.



Join Whatsapp