ಜ್ವರವಿದ್ದರೂ ಚುನಾವಣಾ ಪ್ರಚಾರ ಮಾಡಿರುವುದು ಮುಖ್ಯಮಂತ್ರಿ ಬಿಎಸ್‌ವೈ ಬೇಜವಾಬ್ದಾರಿತನಕ್ಕೆ ಸಾಕ್ಷಿ : ಕಾಂಗ್ರೆಸ್

Prasthutha|

ಬೆಂಗಳೂರು: ಕೊರೋನಾ ಸೋಂಕು ಹೆಚ್ಚುತ್ತಿರುವ ಈ ಕಠಿಣ ಪರಿಸ್ಥಿತಿಯಲ್ಲಿ ಜ್ವರವಿದ್ದರೂ ಚುನಾವಣಾ ಪ್ರಚಾರ ಮಾಡಿರುವುದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬೇಜವಾಬ್ದಾರಿತನಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

- Advertisement -

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸೋಂಕು ತಗುಲಿ ಮಣಿಪಾಲ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಮತ್ತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಕಿಡಿಕಾರಿದೆ.

‘ಕೊರೋನಾ ಸೋಂಕು ಹೆಚ್ಚುತ್ತಿರುವ ಈ ಕಠಿಣ ಪರಿಸ್ಥಿತಿಯಲ್ಲಿ ಜ್ವರವಿದ್ದರೂ ಚುನಾವಣಾ ಪ್ರಚಾರ ಮಾಡಿರುವುದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬೇಜವಾಬ್ದಾರಿತನಕ್ಕೆ ಸಾಕ್ಷಿ. ಈ ಹಿಂದೆ ಕೊರೋನಾ ಸೋಂಕಿತರಾಗಿದ್ದ ರಮೇಶ್ ಜಾರಕಿಹೊಳಿ ಅವರನ್ನು ಚುನಾವಣಾ ಪ್ರಚಾರಕ್ಕೆ ಆಹ್ವಾನಿಸಿದ್ದರು. ಇಂತಹ ಸರ್ಕಾರದಿಂದ ಸೋಂಕು ನಿಯಂತ್ರಣ ಸಾಧ್ಯವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

- Advertisement -

ಲಸಿಕೆಗಳ ಪರಿಣಾಮದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಕ್ಕೆ ಇಂದು ಪುರಾವೆ ಸಿಕ್ಕಿದೆಯಲ್ಲ. ಲಸಿಕೆಗಳು ಪರಿಣಾಮಕಾರಿಯಾಗಿದ್ದರೆ ಲಸಿಕೆ ಪಡೆದಿದ್ದ ಯಡಿಯೂರಪ್ಪ ಅವರಿಗೆ ಸೋಂಕು ತಗುಲಿದ್ದು ಹೇಗೆ, ಏಕೆ? ಲಸಿಕೆ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಿ ಸೋಂಕಿನ ಪ್ರಭಾವ ಕಡಿಮೆಗೊಳಿಸುತ್ತದೆಯೇ ಹೊರತು ಅದೇ ಮದ್ದಾಗುವುದಿಲ್ಲ ತಿಳಿಯಿರಿ ಎಂದು ಸಲಹೆ ನೀಡಿದೆ.

 ‘ರಾಜ್ಯಾದ್ಯಂತ ಲಸಿಕೆ ಕೊರತೆಯಾಗಿರುವ ವರದಿಗಳು ಪ್ರತಿ ದಿನವೂ ಬರುತ್ತಿವೆ. ಆದರೂ ಆತ್ಮವಂಚನೆಯ ಸುಳ್ಳು ಹೇಳುವ ಬಿಜೆಪಿಗೆ ಕೊಂಚವೂ ಲಜ್ಜೆ ಇದ್ದಂತಿಲ್ಲ. ರಾಜ್ಯ ಸರ್ಕಾರಗಳಿಗೆ ಲಸಿಕೆಗಳನ್ನು ನೇರವಾಗಿ ಖರೀದಿಸುವ ಅನುಮತಿಯನ್ನು ಕೇಂದ್ರ ಏಕೆ ನೀಡುತ್ತಿಲ್ಲ? ಈ ಬಗ್ಗೆ ಧ್ವನಿ ಎತ್ತುವ ಧೈರ್ಯ ಏಕೆ ತೋರುತ್ತಿಲ್ಲ ತಾವು? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

Join Whatsapp