ಪಣಜಿ: ಗೋವಾ ಅಸೆಂಬ್ಲಿ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಸ್ವಷ್ಟ ಬಹುಮತ ಪಡೆಯದಿದ್ದಲ್ಲಿ ಸರ್ಕಾರ ರಚಿಸುವ ನಿಟ್ಟಿನಲ್ಲಿ ಬಿಜೆಪಿ ಹೊರತು ಪಡಿಸಿ ಇತರ ಪಕ್ಷಗಳೊಂದಿಗೆ ಚುನಾವಣೋತ್ತರ ಮೈತ್ರಿಯ ಕುರಿತು ಚಿಂತನೆ ನಡೆಸಲಾಗುವುದೆಂದು ಕಾಂಗ್ರೆಸ್ ತಿಳಿಸಿದೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.
ಒಟ್ಟು 40 ಸದಸ್ಯರ ಗೋವಾ ಅಸೆಂಬ್ಲಿಗೆ ಫೆಬ್ರವರಿ 14 ರಂದು ಚುನಾವಣೆ ನಡೆದಿದ್ದು, ಮಾರ್ಚ್ 10 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಈ ಕುರಿತು AICC ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕಾಂಗ್ರೆಸ್ ಪಕ್ಷವು ಗೋವಾದಲ್ಲಿ 21 ಕ್ಕಿಂತ ಕಡಿಮೆ ಸ್ಥಾನ ಪಡೆದರೆ ಆಮ್ ಆದ್ಮಿ ಪಕ್ಷ, ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ, ಟಿಎಂಸಿಯೊಂದಿಗೆ ಮೈತ್ರಿ ನಡೆಸಿ ಸರ್ಕಾರ ರಚಿಸಲಾಗುವುದೆಂದು ತಿಳಿಸಿದ್ದಾರೆ.