ಬೆಂಗಳೂರಿನಲ್ಲಿ ದಲಿತನ ಹತ್ಯೆ: ಪ್ರಚೋದನಾಕಾರಿ ಹೇಳಿಕೆ ನೀಡಿದ ಗೃಹ ಸಚಿವರ ಬಂಧನಕ್ಕೆ ಕಾಂಗ್ರೆಸ್ ಆಗ್ರಹ

Prasthutha|

ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ದಲಿತ ಯುವಕ ಚಂದ್ರ ಎಂಬಾತ ಕೊಲೆಗೆ ಸಂಬಂಧಿಸಿದಂತೆ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಬಂಧಿಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

- Advertisement -

ಕಾಂಗ್ರೆಸ್ ಮುಖಂಡರಾದ ವಿ,ಎಸ್.ಉಗ್ರಪ್ಪ ನೇತೃತ್ವದ ನಿಯೋಗ ಶುಕ್ರವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ಭೇಟಿಯಾಗಿ ಪ್ರಚೋದನಾಕಾರಿ ಹೇಳಿಕೆ ನೀಡಿದ ಅರಗ ಜ್ಞಾನೇಂದ್ರ ಮತ್ತು ಸಿ.ಟಿ. ರವಿ ಅವರನ್ನು ಬಂಧಿಸುವಂತೆ ಆಗ್ರಹಿಸಿದೆ.

ಉರ್ದು ಗೊತ್ತಿಲ್ಲದ ಕಾರಣಕ್ಕೆ ದಲಿತ ಯುವಕನನ್ನು ಮುಸ್ಲಿಮರು ಚಾಕುವಿನಿಂದ ಚುಚ್ಚಿ ಹತ್ಯೆ ನಡೆಸಲಾಗಿದೆ ಎಂದು ರಾಜ್ಯದ ಗೃಹ ಸಚಿವರು ಹೇಳಿಕೆ ನೀಡಿದ ಬೆನ್ನಲ್ಲೇ, ಸಮಾಜವನ್ನು ತಪ್ಪುದಾರಿಗೆಳೆಯುವ ಹೇಳಿಕೆ ನೀಡಿದ ಆರೋಪದಡಿಯಲ್ಲಿ ಕಾಂಗ್ರೆಸ್ ಪ್ರಕರಣ ದಾಖಲಿಸಿದೆ.

- Advertisement -

ಇದಕ್ಕೆ ಸಂಬಂಧಿಸಿದಂತೆ ಅರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರನ್ನು ಬಂಧಿಸುವಂತೆ ಆಗ್ರಹಿಸಿದೆ.

ಬೆಂಗಳೂರಿನ ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್ 5 ರಂದು ವಾಹನ ಅಪಘಾತಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಚಂದ್ರು ಎಂಬಾತನನ್ನು ಹತ್ಯೆ ಮಾಡಲಾಗಿತ್ತು.

ಇದನ್ನು ಮರೆಮಾಚಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಉರ್ದು ಮಾತನಾಡದ ಕಾರಣ ಮುಸ್ಲಿಮರು ಚಂದ್ರವನ್ನು ಹತ್ಯೆ ನಡೆಸಿದ್ದಾರೆ ಎಂಬ ಬೇಜಾವಬ್ದಾರಿ ಹೇಳಿಕೆ ನೀಡಿದ್ದರು. ಇದು ವಿವಾದವಾಗುತ್ತಿದ್ದಂತೆ ಹೇಳಿಕೆಯನ್ನು ಹಿಂಪಡೆದಿದ್ದರು.

ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕೂಡ ಈ ಹತ್ಯೆಯ ಬಗ್ಗೆ ಮುಸ್ಲಿಮರನ್ನು ಗುರಿಯಾಗಿಸಿ ಪ್ರಚೋದನಾಕಾರಿಯಾಗಿ ಹೇಳಿಕೆ ನೀಡಿದ್ದರು.

ಪ್ರಸಕ್ತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಇಬ್ಬರನ್ನು ಬಂಧಿಸುವಂತೆ ಕಾಂಗ್ರೆಸ್ ಆಗ್ರಹಿಸಿದೆ.



Join Whatsapp