September 17, 2021

ಮಂಗಳೂರಿನಲ್ಲಿ ಪಕೋಡಾ ಮಾರಿ ಪ್ರತಿಭಟಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು

ಮಂಗಳೂರು: ಮಂಗಳೂರಿನ ಗಡಿಯಾರ ಗೋಪುರ ಬಳಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಘಟಕದವರು ಪ್ರಧಾನಿ ಮೋದಿಯವರ ಹುಟ್ಟುಹಬ್ಬವನ್ನು ನಿರುದ್ಯೋಗ ದಿನವಾಗಿ ಆಚರಿಸಿದರು. ಇದೇ ವೇಳೆ ಪಕೋಡಾ ತಯಾರಿಸಿ ಮಾರಾಟ ಮಾಡಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


ನರೇಂದ್ರ ಮೋದಿ ಸರಕಾರದ ಕಾಲದಲ್ಲಿ ಹೆಚ್ಚಿದ ನಿರುದ್ಯೋಗ ಸೃಷ್ಟಿಯಾಗಿದೆ ಎಂದು ಆರೋಪಿಸಿದ ಕಾರ್ಯಕರ್ತರು, ಧಿಕ್ಕಾರ ಕೂಗಿ ಅಣುಕು ಪಕೋಡಾ ಮಾರಾಟ ನಡೆಸಿದರು.


ದ. ಕ. ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ನಾಯಕರಾದ ಐವಾನ್ ಡಿಸೋಜಾ, ಶಾಹುಲ್ ಹಮೀದ್, ಶಶಿಧರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!