ಮೈಸೂರು: ಜೆಡಿಎಸ್ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಎಫ್ ಐಆರ್ ಹಾಕಿಸುತ್ತಿದ್ದಾರೆ.ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್’ನ್ನು ಸೋಲಿಸಬೇಕು ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ಕಾರ್ಯಕರ್ತರಿಗೆ ರಕ್ಷಣೆ ಸಿಗುತ್ತಿಲ್ಲ, ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ್ನು ಸೋಲಿಸಬೇಕು. ಇದೇ ಕಾರಣಕ್ಕೆ ಬಿಜೆಪಿ ಜೊತೆ ಮೈತ್ರಿಗೆ ಎಲ್ಲರೂ ಒಲವು ಹೊಂದಿದ್ದಾರೆ ಎಂದರು.