ಮನುವಾದಿ ಬಿಜೆಪಿ ಆಡಳಿತದಲ್ಲಿ ದಲಿತರಿಗೆ ನೆಮ್ಮದಿಯ ಬದುಕಿಲ್ಲದಾಗಿದೆ: ಕಾಂಗ್ರೆಸ್ ಟೀಕೆ

Prasthutha|

ಬೆಂಗಳೂರು: ಬಿಜೆಪಿ ತನ್ನ ಆಡಳಿತದಲ್ಲಿ ದಲಿತ ವಿರೋಧಿ ವಾತಾವರಣ ನಿರ್ಮಿಸುತ್ತಿದೆ. ದಲಿತರಿಗೆ ಮೂತ್ರ ಕುಡಿಸುವುದರಿಂದ ಹಿಡಿದು ಬಹಿಷ್ಕಾರ, ಹಲ್ಲೆಯ ಪ್ರಕರಣಗಳು ಹೆಚ್ಚುತ್ತಿವೆ. ಮನುವಾದಿ ಬಿಜೆಪಿ ಆಡಳಿತದಲ್ಲಿ ದಲಿತರಿಗೆ ನೆಮ್ಮದಿಯ ಬದುಕಿಲ್ಲದಾಗಿದೆ. ಕೇಂದ್ರ ಸಚಿವ ನಾರಾಯಣಸ್ವಾಮಿ ಅವರು ಕಟ್ಟಲು ಹೊರಟ ಹಿಂದೂರಾಷ್ಟ್ರದ ಅಡಿಗಲ್ಲು ಇದೇನಾ!? ಎಂದು ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ.


ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಲಾಗಿದ್ದು, ಮನುಸ್ಮೃತಿಯನ್ನು ನಂಬಿರುವ ಬಿಜೆಪಿ ತನ್ನ ಗುಪ್ತ ಅಜೆಂಡಾವಾದ ದಲಿತ ವಿರೋಧಿ ವಾತಾವರಣವನ್ನು ವ್ಯವಸ್ಥಿತವಾಗಿ ಸ್ಥಾಪಿಸುತ್ತಿರುವ ಪರಿಣಾಮದಿಂದಲೇ ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ. ಬಿಜೆಪಿ ಕರ್ನಾಟಕ ಪಕ್ಷ ಸಂಪುಟದಲ್ಲಿ ದಲಿತರಿಗೆ ಅವಕಾಶ ನೀಡದೆ ತನಗಿರುವ ದಲಿತರ ಮೇಲಿನ ಅಸಹನೆಯನ್ನು ಬಹಿರಂಗಪಡಿಸಿದೆ ಎಂದು ಆರೋಪಿಸಿದೆ.

- Advertisement -