Home ಟಾಪ್ ಸುದ್ದಿಗಳು ನಾವು ಕತ್ತಿ ಹಿಡಿದರೆ ನಿಮಗೆ ಶವ ಹೂಳಲು ಜಾಗ ಇರುವುದಿಲ್ಲ ಎಂಬ ವಿಎಚ್ ಪಿ ಹೇಳಿಕೆಗೆ...

ನಾವು ಕತ್ತಿ ಹಿಡಿದರೆ ನಿಮಗೆ ಶವ ಹೂಳಲು ಜಾಗ ಇರುವುದಿಲ್ಲ ಎಂಬ ವಿಎಚ್ ಪಿ ಹೇಳಿಕೆಗೆ ಕಾಂಗ್ರೆಸ್ ಕಿಡಿ

ಬೆಂಗಳೂರು : ನಾವು ಕತ್ತಿ ಹಿಡಿದರೆ ನಿಮಗೆ ಶವ ಹೂಳಲು ಜಾಗ ಇರುವುದಿಲ್ಲ’ ಎಂಬ ವಿಶ್ವ ಹಿಂದೂ ಪರಿಷತ್ ರಾಜ್ಯ ಸಂಚಾಲಕ ಬಸವರಾಜ್ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಡಿಸಿದೆ.
ತುಮಕೂರಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ವಿಶ್ವ ಹಿಂದೂ ಪರಿಷತ್ನ ರಾಜ್ಯ ಸಂಚಾಲಕ ಬಸವರಾಜ್ ಮಾತನಾಡಿ, ಹಿಂದೂಗಳು ಕತ್ತಿ ಹಿಡಿದರೆ ನಿಮಗೆ ಶವ ಹೂಳಲು ಜಾಗ ಇರುವುದಿಲ್ಲ ಎಂದು ಹೇಳಿದ್ದರು.


ಈ ವರದಿಯನ್ನು ಟ್ವಿಟರ್ ನಲ್ಲಿ ಹಂಚಿಕೊಳ್ಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.ಮುಖ್ಯಮಂತ್ರಿಗಳ ‘ಆಕ್ಷನ್’ಗೆ ಬಿಜೆಪಿಯ ಸಮಾಜಘಾತುಕ ಪಡೆಯ ‘ರಿಯಾಕ್ಷನ್’ ಹೆಚ್ಚುತ್ತಿದೆ. ‘ಸರ್ಕಾರಕ್ಕೆ ಈ ಸಮಾಜ ವಿರೋಧಿ ಸಂಘಟನೆಗಳ ನಿಯಂತ್ರಣ ಸಾಧ್ಯವಿಲ್ಲವೇ ಅಥವಾ ಸರ್ಕಾರವೇ ಇವರ ಬೆಂಬಲಕ್ಕೆ ನಿಂತಿದೆಯೇ ಎಂದು ಸಿಎಂ ಸ್ಪಷ್ಟಪಡಿಸಬೇಕು’ ಎಂದೂ ಒತ್ತಾಯಿಸಿದೆ.’ರಾಮರಾಜ್ಯ ಎಂದು ಬೊಗಳೆ ಬಿಡುವ ಬಿಜೆಪಿ ಆಡಳಿತದಲ್ಲಿ ಜನಸಾಮಾನ್ಯರಿಗೆ ರಕ್ಷಣೆ ಇಲ್ಲವೇ?’ ಎಂದು ಕೆಪಿಸಿಸಿ ಪ್ರಶ್ನಿಸಿದೆ.

Join Whatsapp
Exit mobile version