Home ಟಾಪ್ ಸುದ್ದಿಗಳು ಇತಿಹಾಸ ತಿರುಚಿದ ಪಠ್ಯಪುಸ್ತಕ ಪರಿಷ್ಕರಣೆ ರದ್ದುಗೊಳಿಸಲು ಒತ್ತಾಯಿಸಿ ಕಾಂಗ್ರೆಸ್ ಧರಣಿ

ಇತಿಹಾಸ ತಿರುಚಿದ ಪಠ್ಯಪುಸ್ತಕ ಪರಿಷ್ಕರಣೆ ರದ್ದುಗೊಳಿಸಲು ಒತ್ತಾಯಿಸಿ ಕಾಂಗ್ರೆಸ್ ಧರಣಿ

ಬೆಂಗಳೂರು: ನಾಡಿನ ದಾರ್ಶನಿಕರು, ಮಹಾನ್ ಚೇತನಗಳಿಗೆ ಅಪಮಾನ ಮಾಡಿ, ಇತಿಹಾಸ ತಿರುಚಿರುವ ಪಠ್ಯಪುಸ್ತಕ ಪರಿಷ್ಕರಣೆ ರದ್ದುಗೊಳಿಸಿ ಹಿಂದಿನ ಪಠ್ಯಕ್ರಮ ಮುಂದುವರೆಸುವಂತೆ ಆಗ್ರಹಿಸಿ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಗುರುವಾರ ಧರಣಿ ನಡೆಸಿದರು.

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯಿತು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಹಾಲಿ, ಮಾಜಿ ಶಾಸಕರು, ಪದಾಧಿಕಾರಿಗಳು ಭಾಗವಹಿಸಿದ್ದರು.

Join Whatsapp
Exit mobile version