ಅಗ್ನಿಪಥ್ ಯೋಜನೆ ವಿರೋಧಿಸಿ ಕಾಂಗ್ರೆಸ್’ನಿಂದ ರಾಷ್ಟ್ರವ್ಯಾಪಿ ಧರಣಿ

Prasthutha|

ನವದೆಹಲಿ: ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ಸೋಮವಾರ ದೇಶಾದ್ಯಂತ ಸುಮಾರು 3500ಕ್ಕೂ ಅಧಿಕ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಮವಾರ ಧರಣಿ ನಡೆಸಿದೆ.

- Advertisement -

ಅಗ್ನಿಪಥ್ ಯೋಜನೆಯನ್ನು ತಕ್ಷಣವೇ ಹಿಂಪಡೆಯುವಂತೆ ಆಗ್ರಹಿಸುತ್ತಿರುವ ಯುವಕರಿಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬೆಂಬಲಿಸಲಿದೆ. ಬಿಜೆಪಿ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸುವ ಮೂಲಕ ರಾಷ್ಟ್ರೀಯ ಭದ್ರತೆಯನ್ನು ದುರ್ಬಲಗೊಳಿಸಬಾರದು ಎಂದು ಕಾಂಗ್ರೆಸ್ ಮುಖಂಡ ಮೋಹನ್ ಪ್ರಕಾಶ್ ಆಗ್ರಹಿಸಿದ್ದಾರೆ.

ಸಶಸ್ತ್ರ ಪಡೆಗೆ ಸೇರುವ ಮೂಲಕ ದೇಶ ಸೇವೆ ಮಾಡಲು ಹಾತೊರೆಯುವ ಲಕ್ಷಾಂತರ ಪುರುಷರು ಮತ್ತು ಮಹಿಳೆಯರಿಗೆ ಸರ್ಕಾರ ಅಭದ್ರತೆಗಿಂತ ಭದ್ರತೆಯನ್ನು ಒದಗಿಸಬೇಕು. ಸಶಸ್ತ್ರ ಪಡೆಗಳಲ್ಲಿ 1,25, 000 ಖಾಲಿ ಹುದ್ದೆಗಳಿಗೆ ಭರ್ತಿ ಮಾಡದ ಆಘಾತಕಾರಿ ಅಂಶಗಳನ್ನು ಕೇಂದ್ರ ಸರ್ಕಾರವೇ ಒಪ್ಪಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.

- Advertisement -

ಈ ಮಧ್ಯೆ ವಿವಾದಾತ್ಮಕ ಅಗ್ನಿಪಥ್ ಯೋಜನೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಕಾಂಗ್ರೆಸ್, ಧರಣಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದೆ. ಅಗ್ನಿಪಥ್ ವಿರೋಧಿಸಿ ನಡೆಸಿದ ಪ್ರತಿಭಟನೆಯ ವೇಳೆ ಬಂಧಿಸಲ್ಪಟ್ಟು ವಿವಿಧ ಜೈಲುಗಳಲ್ಲಿ ಬಂಧಿಯಾಗಿರುವ ಯುವಕರನ್ನು ಬಿಡುಗಡೆ ಮಾಡುವಂತೆ ಕಾಂಗ್ರೆಸ್ ಒತ್ತಾಯಿಸಿದೆ.



Join Whatsapp