ಜಾತಿ ಗಣತಿ ವಿಚಾರದಲ್ಲಿ ಕಾಂಗ್ರೆಸ್ ತನ್ನ ನಿಲುವಿಗೆ ಬದ್ಧ: ಡಿಕೆ ಶಿವಕುಮಾರ್

Prasthutha|

ಬೆಂಗಳೂರು : ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ. ಆದರೆ ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು ಎಂದು ವಿವಿಧ ಸಮುದಾಯಗಳು ಆಗ್ರಹಿಸಿವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

- Advertisement -


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಬಳಿ ಇಂದು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಸಿಗಬೇಕು ಎಂದು ಅನೇಕ ಸಮುದಾಯಗಳು ಆಗ್ರಹ ಮಾಡಿವೆ. ಪರಿಶಿಷ್ಟರು, ಪಂಚಮಸಾಲಿ, ವೀರಶೈವರು, ಒಕ್ಕಲಿಗರು ಸೇರಿದಂತೆ ಹಲವರು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟದಲ್ಲಿ ಪಕ್ಷಭೇದ ಮರೆತು ಹೋರಾಟ ಮಾಡಲಾಗುತ್ತಿದೆ. ಕೆಲ ಸಮುದಾಯ ಹಾಗೂ ಅದರ ನಾಯಕರು ಜಾತಿ ಗಣತಿ ಸಮೀಕ್ಷೆ ವೇಳೆ ನಮ್ಮನ್ನು ಸಂಪರ್ಕಿಸಿಲ್ಲ. ಹೀಗಾಗಿ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡಬೇಕು ಎಂದು ಕೇಳುತ್ತಿವೆ ಎಂದು ತಿಳಿಸಿದರು.



Join Whatsapp