ಚಂಡಿಗಢ: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿದ್ದು, ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಕೆಲವೇ ನಿಮಿಷಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಗಳು ಲಭಿಸಿವೆ.
ಪಂಜಾಬ್ ನಲ್ಲಿ ಇದೇ ಮೊದಲ ಬಾರಿಗೆ ಆಮ್ ಆದ್ಮಿ ಪಾರ್ಟಿ ಅಧಿಕಾಕ್ಕೇರಲಿದ್ದು ಒಟ್ಟು 117 ಕ್ರೇತ್ರಗಳ ಪೈಕಿ ಎಎಪಿಗೆ 90 ಕ್ಷೇತ್ರಗಳಲ್ಲಿ ಮುನ್ನಡೆ ಸಿಕ್ಕಿದೆ. ಈಗಾಗಲೇ ಮ್ಯಾಜಿಕ್ ನಂಬರ್ 51 ಅನ್ನು ದಾಟಿರುವ ಎಎಪಿ, ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ.
ಎಎಪಿ ಸಿಎಂ ಅಭ್ಯರ್ಥಿ ಭಗವಾನ್ ಮಾನ್ ಮನೆ ಮುಂದೆ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದ್ದು, ಇನ್ನು ಕೆಲವೇ ಕ್ಷಣದಲ್ಲಿ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಿ ಚರಣ್‌ಜಿತ್ ಸಿಂಗ್ ಚನ್ನಿ ರಾಜೀನಾಮೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.