ವಿದ್ಯುತ್​ ದರ ಏರಿಕೆಗೆ ಕಾಂಗ್ರೆಸ್​ ಕಾರಣ ಎಂದ  ಸಚಿವ ಸುನಿಲ್ ಕುಮಾರ್

Prasthutha|

ಉಡುಪಿ:  ಅಕ್ಟೋಬರ್ 01ರಿಂದ ರಾಜ್ಯಾದ್ಯಂತ ವಿವಿಧ ಎಸ್ಕಾಂಗಳ ವ್ಯಾಪ್ತಿಯಲ್ಲಿ ಪ್ರತಿ ಯುನಿಟ್‌ ವಿದ್ಯುತ್‌ಗೆ 24 ಪೈಸೆಯಿಂದ 43 ಪೈಸೆವರೆಗೆ ದರ ಹೆಚ್ಚಳವಾಗಿದ್ದು, ದರ ಏರಿಕೆಗೆ ಕಾಂಗ್ರೆಸ್ ಕಾರಣ ಎಂದು ಇಂಧನ ಸಚಿವ ವಿ.ಸುನಿಲ್​ ಹೇಳಿದ್ದಾರೆ.

- Advertisement -

ಈ ಕುರಿತು ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುನಿಲ್ ಕುಮಾರ್, 2014ರಲ್ಲಿ ರೂಪಿಸಿದ ನಿಯಮಾವಳಿಯೇ ಮುಂದುವರೆಯುತ್ತಿದೆ. ನಮ್ಮ ಸರ್ಕಾರ ಯಾವುದೇ ಹೊಸ ನಿಯಮಾವಳಿ ಮಾಡಿಲ್ಲ. ರಾಜ್ಯದ ಜನತೆಗೆ ಹೊರೆಯಾಗುತ್ತಿದೆ ಎಂದು ನನಗೂ ಅನ್ನಿಸಿದೆ. ಕಾಂಗ್ರೆಸ್ ತಂದ ಈ ಪದ್ಧತಿಯಿಂದ ಜನರಿಗೆ ಹೊರೆಯಾಗುತ್ತಿದೆ ಎಂದು ಹೇಳಿದ್ದಾರೆ.

Join Whatsapp