ಉಚಿತ ಲಸಿಕೆ ನೀಡುವಂತೆ ಒತ್ತಾಯ: ಕಾಂಗ್ರೆಸ್ ನಿಯೋಗದಿಂದ ರಾಜ್ಯಪಾಲರ ಭೇಟಿ

Prasthutha|

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ನಿಯೋಗವು ಶುಕ್ರವಾರ ಸಂಜೆ ರಾಜಭವನದಲ್ಲಿ ರಾಜ್ಯಪಾಲರ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ, ಕೇಂದ್ರ ಸರ್ಕಾರವು ಕೊರೋನಾ ಲಸಿಕೆ ವಿಚಾರದಲ್ಲಿ ನಡೆದುಕೊಳ್ಳುತ್ತಿರುವ ಕ್ರಮವನ್ನು ಖಂಡಿಸಿದೆ. ರಾಷ್ಟ್ರದ ಜನತೆಗೆ ಉಚಿತವಾಗಿ ಲಸಿಕೆ ನೀಡಲು ಕೇಂದ್ರ ಸರಕಾರಕ್ಕೆ ಸೂಚಿಸಬೇಕೆಂದು ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ಮಾಜಿ ಸಚಿವ ಆರ್.ವಿ ದೇಶಪಾಂಡೆ, ಹೆಚ್.ಕೆ ಪಾಟೀಲ್ ನಿಯೋಗದಲ್ಲಿದ್ದರು.

- Advertisement -