ಕಾಂಗ್ರೆಸ್‌ ಟಿಕೆಟ್‌ ಹಂಚಿಕೆ ಕಸರತ್ತು: ಇಂದು ಸಿದ್ದರಾಮಯ್ಯ ದೆಹಲಿಗೆ

Prasthutha|

ಬೆಂಗಳೂರು: ಲೋಕಸಭಾ ಚುನಾವಣೆಗೆ ಮೊದಲ ಹಂತದಲ್ಲಿ 95 ಅಭ್ಯರ್ಥಿಗಳನ್ನ ಘೋಷಣೆ ಮಾಡಿರುವ ಕಾಂಗ್ರೆಸ್ ಇದೀಗ ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ. ಇದಕ್ಕಾಗಿ ದೆಹಲಿಯಲ್ಲಿ ಸಭೆಗಳ ಮೇಲೆ ಸಭೆ ನಡೆಸುತ್ತಿದೆ.

- Advertisement -

ದೆಹಲಿಯ ಎಐಸಿಸಿ ಕಚೇರಿಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಮಾಲೋಚನಾ ಸಭೆಗಳು ನಡೆಯುತ್ತಿದ್ದು, ಅದರಲ್ಲಿ ಭಾಗವಹಿಸುವುದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಲಿದ್ದಾರೆ.

ದೆಹಲಿಗೆ ತೆರಳುವ ಮುನ್ನ ಸಿಎಂ ಕೋಲಾರ ಅಭ್ಯರ್ಥಿ ಆಯ್ಕೆ ಬಗ್ಗೆ ಸಭೆ ನಡೆಸಿದ್ದಾರೆ.

Join Whatsapp