Home ಟಾಪ್ ಸುದ್ದಿಗಳು ಮಾಜಿ ಸಂಸದ ಧ್ರುವನಾರಾಯಣ್ ಪುತ್ರನಿಗೆ ಕಾಂಗ್ರೆಸ್ ಟಿಕೆಟ್

ಮಾಜಿ ಸಂಸದ ಧ್ರುವನಾರಾಯಣ್ ಪುತ್ರನಿಗೆ ಕಾಂಗ್ರೆಸ್ ಟಿಕೆಟ್

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‍ ನಿಂದ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು ಧ್ರುವನಾರಾಯಣ್ ಪುತ್ರ ದರ್ಶನ್‍ ಗೆ ನಂಜನಗೂಡು ಕ್ಷೇತ್ರದಿಂದ ಟಿಕೆಟ್ ಘೋಷಣೆ ಮಾಡಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಈಗಾಗಲೇ ಬಿಡುಗಡೆಗೊಂಡಿದೆ. ಮೈಸೂರಿನ 11 ಕ್ಷೇತ್ರಗಳಲ್ಲಿ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಅದರಲ್ಲೂ ಮೈಸೂರಿನ ನಂಜನಗೂಡು ಕ್ಷೇತ್ರದ ಅಭ್ಯರ್ಥಿ ಯಾರು ಎನ್ನುವುದರ ಬಗ್ಗೆ ತೀವ್ರ ಕುತೂಹಲ ಮೂಡಿಸಿತ್ತು. ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್‍ ಗೆ ಮಾಜಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ಮತ್ತು ಧ್ರುವನಾರಾಯಣ್ ನಡುವೆ ಫೈಟ್ ಸೃಷ್ಟಿಯಾಗಿತ್ತು.

Join Whatsapp
Exit mobile version