ಭಾರತ ದೇಶ ಹಿಂದುಳಿಯಲು ಕಾಂಗ್ರೆಸ್ ಕಾರಣ: ಶ್ರೀ ರಾಮುಲು

Prasthutha|

ಚಿತ್ರದುರ್ಗ: ಭಾರತ ದೇಶ ಹಿಂದುಳಿಯಲು ಕಾಂಗ್ರೆಸ್ ಪಕ್ಷ ಕಾರಣವೆಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ.


ಇಲ್ಲಿ ನೂತನ ಪ್ರವಾಸಿ ಮಂದಿರ ಉದ್ಘಾಟನೆಗೂ ಮುನ್ನ ಮಾತನಾಡಿದ ಅವರು, ಈ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಉದ್ಭವಿಸಲು ಕಾಂಗ್ರೆಸ್ ಕಾರಣವಾಗಿದ್ದು, ದೇಶ ಪಾತಾಳಕ್ಕೆ ಹೋಗಲು ಕೂಡ ಕಾಂಗ್ರೆಸ್ ಕಾರಣವೆಂದು ಆರೋಪಿಸಿದ್ದಾರೆ.

- Advertisement -

2023ಕ್ಕೆ ನಮ್ಮ ಮನೆ ಬಾಗಿಲಿಗೆ ಎಲ್ಲಾ ಪಕ್ಷಗಳು ಬರಬೇಕಾಗುತ್ತದೆ ಎಂದು ದೇವೇಗೌಡರ ಹೇಳಿಕೆ ಕುರಿತಂತೆ, ದೇವೇಗೌಡರು, ಜೆಡಿಎಸ್ ಹಾಗೂ ಹೆಚ್ಡಿಕೆ ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೆ ಅವರೊಂದಿಗೆ ಹೋಗುವ ವಿಚಾರವನ್ನು ನಮ್ಮ ರಾಷ್ಟ್ರೀಯ ನಾಯಕರು ಮುಂದೆ ತೀರ್ಮಾನ ಕೈಗೊಳ್ಳುತ್ತಾರೆ. ಆದರೆ ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಕೂಡದೆಂಬ ಸ್ಪಷ್ಟತೆಯಿದೆ. ಆಗ ಅಂತಹ ಸಂದರ್ಭ ಬಂದರೆ ದೇವೇಗೌಡರನ್ನು ಕೇಳುವುದರಲ್ಲಿ ತಪ್ಪಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

- Advertisement -