ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪುತ್ರ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. ಇದನ್ನು ವಿರೋಧಿಸಿ ನಾಳೆ ಕಾಂಗ್ರೆಸ್ ದೇಶಾದ್ಯಂತ ಸುದ್ದಿಗೋಷ್ಠಿ ನಡೆಸಲಿದೆ.
ಜೂನ್ 8ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗುವಂತೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಈ ದಿನಾಂಕದಂದು ಅವರು ಹಾಜರಾಗಿಲ್ಲ. ಜೊತೆಗೆ ಸೋನಿಯಾ ಅವರಿಗೆ ಕೋವಿಡ್ ಕಾಣಿಸಿಕೊಂಡ ಕಾರಣ ವಿಚಾರಣೆಯಿಂದ ದೂರ ಉಳಿದಿದ್ದರು.
ರಾಹುಲ್ ಗಾಂಧಿ ಜೂನ್ 13 ಹಾಗೂ ಸೋನಿಯಾ ಗಾಂಧಿ ಅವರಿಗೆ ಜೂನ್ 23ರಂದು ಜಾರಿ ನಿರ್ದೇಶನಾಲಯದ ಎದುರು ಹಾಜರಾಗಲು ಸಮನ್ಸ್ ನೀಡಲಾಗಿದೆ.