Home ಟಾಪ್ ಸುದ್ದಿಗಳು ಹಿಂಡನ್ ಬರ್ಗ್ ಆರೋಪ: ಆ.22ಕ್ಕೆ ಕಾಂಗ್ರೆಸ್ ನಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ

ಹಿಂಡನ್ ಬರ್ಗ್ ಆರೋಪ: ಆ.22ಕ್ಕೆ ಕಾಂಗ್ರೆಸ್ ನಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ

ನವದೆಹಲಿ: ಹಿಂಡನ್ ಬರ್ಗ್ ಆರೋಪಕ್ಕೆ ಸಂಬಂಧಿಸಿದಂತೆ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ರಾಜೀನಾಮೆ ನೀಡುವಂತೆ ಮತ್ತು ಆರೋಪಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ ರಚಿಸುವಂತೆ ಆಗ್ರಹಿಸಿ ಆಗಸ್ಟ್ 22ರಂದು ಕಾಂಗ್ರೆಸ್ ರಾಷ್ಟ್ರವ್ಯಾಪಿ ಪ್ರತಿಭಟನೆ ಹಮ್ಮಿಕೊಂಡಿದೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಸಿ.ವೇಣುಗೋಪಾಲ್, ‘ಸೆಬಿ ಅಧ್ಯಕ್ಷರ ರಾಜೀನಾಮೆ ಮತ್ತು ಜೆಪಿಸಿ ರಚಿಸುವಂತೆ ಒತ್ತಾಯಿಸಿ ಆಗಸ್ಟ್ 22ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಮಾಡುವ ಬಗ್ಗೆ ಸಭೆಯಲ್ಲಿ ಸರ್ವಾನುಮತದಿಂದ ನಿರ್ಧರಿಸಲಾಗಿದೆ’ ಎಂದರು.


‘ಅದಾನಿ ಸಮೂಹ ಮತ್ತು ಸೆಬಿ ಅಧ್ಯಕ್ಷೆ ನಡುವಿನ ಸಂಬಂಧದ ಬಗ್ಗೆ ಸಂಪೂರ್ಣ ತನಿಖೆ ನಡೆಯಬೇಕಿದೆ. ಷೇರು ಮಾರುಕಟ್ಟೆಯಲ್ಲಿ ಸಣ್ಣ ಹೂಡಿಕೆದಾರರಿಗೆ ಧಕ್ಕೆ ಆಗದಂತೆ ನೋಡಿಕೊಳ್ಳಬೇಕಿದೆ’ ಎಂದು ಮಲ್ಲಿಕಾರ್ಜುನ ಖರ್ಗೆ ಎಕ್ಸ್ ನಲ್ಲಿ ಹೇಳಿದರು.


‘ಮೋದಿ ಸರ್ಕಾರ ಈ ತಕ್ಷಣವೇ ಸೆಬಿ ಅಧ್ಯಕ್ಷರಿಂದ ರಾಜೀನಾಮೆ ಕೇಳಬೇಕು ಮತ್ತು ಜಂಟಿ ಸಂಸದೀಯ ಸಮಿತಿ ರಚಿಸಬೇಕು’ ಎಂದು ಒತ್ತಾಯಿಸಿದರು.

Join Whatsapp
Exit mobile version