ಬೆಂಗಳೂರು: ಕಾಂಗ್ರೆಸ್ ಬಂಡಾಯ ನಾಯಕ ಸಿಎಂ ಇಬ್ರಾಹಿಂ ಅವರು ಇತ್ತೀಚ್ಚೆಗೆ ಪಕ್ಷದ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಾ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ಅವರು ಪಕ್ಷದಲ್ಲಿಯೇ ಉಳಿಯಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪರವಾಗಿ ಮಾಜಿ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಅವರು ಸೋಮವಾರ ಇಬ್ರಾಹಿಂ ಅವರ ನಿವಾಸಕ್ಕೆ ತೆರಳಿ ಮನವೊಲಿಸುವ ಕಾರ್ಯ ಮಾಡಿದ್ದಾರೆ. ಹಲವು ತಾಸಿನ ಸಭೆಯ ಬಳಿಕ ಇಬ್ರಾಹಿಂ ಮನಸ್ಸು ಬದಲಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಫೆಬ್ರವರಿ 10ರವರೆಗೆ ಅವರು ಸಮಯಾವಕಾಶ ಕೋರಿದ್ದಾರೆ ಎಂದು ಎಚ್.ಸಿ ಮಹಾದೇವಪ್ಪ ಹೇಳಿದ್ದಾರೆ. ಪಕ್ಷ ತೊರೆದು ಜೆಡಿಎಸ್ ಸೇರುವ ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ನಾನು ನನ್ನ ದಾರಿ ಕಂಡುಕೊಂಡಿದ್ದೇನೆ ಮತ್ತು ಫೆಬ್ರವರಿ 13 ರಂದು ಹುಬ್ಬಳ್ಳಿಯಿಂದ ನನ್ನ ಹಿತೈಷಿಗಳ ಸಭೆಯೊಂದಿಗೆ ಉತ್ತರ ಕರ್ನಾಟಕ ಪ್ರವಾಸ ಮಾಡುತ್ತಿದ್ದೇನೆ ಎಂದು ಸಿಎಂ ಇಬ್ರಾಹಿಂ ತಿಳಿಸಿದ್ದಾರೆ.