ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Prasthutha|

ಕಾರವಾರ: ಮುಂದಿನ ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಭರದ ಸಿದ್ಧತೆ ಆರಂಭಿಸಿದೆ. ಎರಡು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಈ ಬಾರಿ ಅಭ್ಯರ್ಥಿಗಳ ಆಯ್ಕೆ ಅಷ್ಟೊಂದು ಸಮಸ್ಯೆ ಆಗಿಲ್ಲ. ಆದಷ್ಟು ಬೇಗ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.


ಮಾರ್ಚ್ 7ರಂದು ಕಾಂಗ್ರೆಸ್ ಸಿಇಸಿ ಸಭೆ ನಡೆಯಲಿದ್ದು, ಆ ಬಳಿಕ ಅಭ್ಯರ್ಥಿಗಳ ಪಟ್ಟಿಯ ಮಾಹಿತಿ ದೊರೆಯಲಿದೆ ಎಂದು ಡಿಸಿಎಂ ಸಹ ಈಗಾಗಲೇ ತಿಳಿಸಿದ್ದಾರೆ. ಈ ಮಧ್ಯೆ, ಸಿಎಂ ಕೂಡ ಹೇಳಿಕೆ ನೀಡಿರುವುದರಿಂದ ಕೆಲವೇ ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಹುತೇಕ ಖಚಿತವಾಗಿದೆ.



Join Whatsapp