ಕಾಂಗ್ರೆಸ್ ಪಾದಯಾತ್ರೆಯಿಂದ ಬಿಜೆಪಿಗೆ ನಡುಕ: ಸಿದ್ದರಾಮಯ್ಯ ವ್ಯಂಗ್ಯ

Prasthutha|

ಬೆಂಗಳೂರು:  ಕಾಂಗ್ರೆಸ್ ಪಾದಯಾತ್ರೆಯಿಂದ ಬಿಜೆಪಿಗೆ ಭಯ ಮತ್ತು ನಡುಕ ಶುರುವಾಗಿದೆ. ಅದೇ ಕಾರಣಕ್ಕೆ ಪಾದಯಾತ್ರೆ ತಡೆಯಲು ಏನೇನೋ ಕಸರತ್ತು ನಡೆಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

- Advertisement -

ಈ ಸಂದರ್ಭದಲ್ಲಿ ಜೆಡಿಎಸ್ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, ‘ಜೆಡಿಎಸ್ನವರು ಮೊದಲಿನಿಂದಲೂ ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡೇ ಬಂದಿದ್ದಾರೆ. ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡು ಚುನಾವಣೆ ಎದುರಿಸಿದ್ದಾರೆ. ಮುಂದೆ ನಮ್ಮದೇ ಪಕ್ಷ ನಿರ್ಣಾಯಕ ಸ್ಥಾನದಲ್ಲಿ ಇರಲಿದೆ’ ಎಂದು ಹೇಳಿದರು.

Join Whatsapp