Home ಟಾಪ್ ಸುದ್ದಿಗಳು ವಿರೋಧ ಪಕ್ಷಗಳನ್ನು ಅಸ್ಥಿರಗೊಳಿಸುವ ಕಾರ್ಯದಲ್ಲಿ ಕಾಂಗ್ರೆಸ್ ತೊಡಗಿದೆ: ಕುಮಾರಸ್ವಾಮಿ ಕಿಡಿ

ವಿರೋಧ ಪಕ್ಷಗಳನ್ನು ಅಸ್ಥಿರಗೊಳಿಸುವ ಕಾರ್ಯದಲ್ಲಿ ಕಾಂಗ್ರೆಸ್ ತೊಡಗಿದೆ: ಕುಮಾರಸ್ವಾಮಿ ಕಿಡಿ

ಮೈಸೂರು: ‘ಕಾಂಗ್ರೆಸ್ ನವರು ಉತ್ತಮವಾಗಿ ಸರ್ಕಾರ ನಡೆಸಿ, ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಬದಲಿಗೆ ವಿರೋಧ ಪಕ್ಷಗಳನ್ನು ಅಸ್ಥಿರಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ’ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಒಳ್ಳೆಯ ಕೆಲಸಗಳನ್ನು ಮಾಡಲೆಂದು ಜನರು ಅವರಿಗೆ ಆಶೀರ್ವದಿಸಿದರು. ಆದರೆ, ಈ ಸರ್ಕಾರದವರು ಮಾಡುತ್ತಿರುವುದೇನು? ಆಡಳಿತದ ವಿಷಯದಲ್ಲಿ ರಾಜ್ಯಕ್ಕೆ ಇದ್ದ ಹೆಸರು ಸರ್ವನಾಶಕ್ಕೆ ಹೊರಟಿದ್ದಾರೆ’ ಎಂದು ಆರೋಪಿಸಿದರು.


‘ನಾವೆಲ್ಲರೂ ಒಂದಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಲೇ ಇರುತ್ತಾರೆ. ಯಾರಿಗೋಸ್ಕರ ಒಂದಾಗಿದ್ದಾರೆ? ಅಧಿಕಾರಕ್ಕೆ ಮತ್ತು ಕುರ್ಚಿಗಾಗಿ ಮಾತ್ರವೇ ಒಂದಾಗುತ್ತಿದ್ದಾರೆ. ಕುರ್ಚಿ ಕೊಟ್ಟ ಜನರಿಗಾಗಿ ಏನು ಮಾಡುತ್ತಿದ್ದಾರೆ; ಏನು ಕೊಟ್ಟಿದ್ದಾರೆ?’ ಎಂದು ಕೇಳಿದರು.

Join Whatsapp
Exit mobile version