ಬಿಜೆಪಿಯಲ್ಲಿ ಸದ್ದು ಮಾಡುತ್ತಿರುವುದು ಒಂದು ಲಂಚ ಮತ್ತೊಂದು ಮಂಚ । ಕಾಂಗ್ರೆಸ್ ಕಟು ಟ್ವೀಟ್

Prasthutha: March 13, 2021

ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಟ್ವೀಟ್ ಸಮರ ತಾರಕಕ್ಕೇರಿದೆ. ಸಾಮಾಜಿಕ ತಾಣಗಳಲ್ಲಿ ಕೆಸರೆರಚಾಟ ತುಂಬಾ ಜೋರಾಗಿಯೇ ನಡೆಯುತ್ತಿದೆ. ರಮೇಶ್ ಜಾರಕಿಹೊಳಿ ಪ್ರಕರಣ ದಿನಕ್ಕೊಂದರಂತೆ ಹೊಸ ತಿರುವು ಪಡೆಯುತ್ತಿದೆ. ಇದು ಬಿಜೆಪಿಗೆ ತೀವ್ರ ಮುಜುಗರವನ್ನು ಉಂಟುಮಾಡಿದ್ದು, ಬಿಜೆಪಿ ಆಡಳಿತದಲ್ಲಿ ಸದ್ದು ಮಾಡುತ್ತಿರುವುದು ಎರಡೇ. ಒಂದು ಲಂಚ ಮತ್ತೊಂದು ಮಂಚ ಎಂದು ಕಾಂಗ್ರೆಸ್ ಟ್ವೀಟ್ ,ಮೂಲಕ ಕಾಟುವಾಗಿ ಟೀಕಿಸಿದೆ.

ಈ ಬಗ್ಗೆ ಕಾಂಗ್ರೆಸ್ ನಿರಂತರವಾಗಿ ಬಿಜೆಪಿ ಪಕ್ಷವನ್ನು ಮತ್ತು ಮುಖ್ಯಮಂತ್ರಿಗಳನ್ನು ಕಾಲೆಳುಯುತ್ತಿದ್ದು ಜಾರಕಿಹೊಳಿ ಪ್ರಕರಣದ ಬಗ್ಗೆ ಟ್ವೀಟ್ ನಲ್ಲಿ ಹೊಸ ಲೇವಡಿ ಮಾಡಿದೆ. “ಬಿಜೆಪಿ ಆಡಳಿತದಲ್ಲಿ ಸದ್ದು ಮಾಡುವುದು ಎರಡೇ. ಒಂದು ಲಂಚ ಮತ್ತೊಂದು ಮಂಚ ಎಂದಿದೆ. ಸಿಡಿ ನಿಜಕ್ಕೂ ನಕಲಿಯೇ ಆಗಿದ್ದರೆ ರಮೇಶ್ ಜಾರಕಿಹೊಳಿಯವರು ದೂರು ನೀಡಲು ಮೀನಾಮೇಷ ಎಣಿಸುತ್ತಿರುವುದೇಕೆ ? ಖಾಸಗಿ ಏಜೆನ್ಸಿಗಳ ಮೊರೆ ಹೋಗುವುದೇತಕೆ ? ಸರ್ಕಾರಿ ತನಿಖಾ ಸಂಸ್ಥೆಗಳ ಮೇಲೆ ನಂಬಿಕೆಯಿಲ್ಲವೇ ಅಥವಾ ಬಿಜೆಪಿಗರ ನಡುವಿನ ಒಳಜಗಳದ ತಿಕ್ಕಾಟದಲ್ಲಿ ತಾವೇ ಬಲಿಯಾಗುವ ಭಯವೇ” ಎಂದು ಟ್ವೀಟ್ ಮೂಲಕ ಪ್ರಶ್ನಿಸಿದೆ

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!