ಗ್ಯಾರಂಟಿ ಯೋಜನೆಗಳ ಕೈಬಿಡುವಂತೆ ಕಾಂಗ್ರೆಸ್’ನಲ್ಲೇ ಒತ್ತಡ: ಸಂಸದ ಜಗದೀಶ್ ಶೆಟ್ಟರ್

Prasthutha|

ಬೆಳಗಾವಿ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಫಲ ಕೊಡಲಿಲ್ಲ ಎಂಬುದು ಕಾಂಗ್ರೆಸ್ ಶಾಸಕರಿಗೆ ಖಾತ್ರಿಯಾಗಿದೆ. ಈ ಯೋಜನೆಗಳ ಕುರಿತು ಸ್ವತಃ ಅವರಿಗೇ ಸಮಾಧಾನವಿಲ್ಲ ಎಂದು ಬೆಳಗಾವಿ ಕ್ಷೇತ್ರದ ಸಂಸದ ಜಗದೀಶ್ ಶೆಟ್ಟರ್ ಹೇಳಿದರು.

- Advertisement -


ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆಗಳ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏನೇ ಹೇಳಬಹುದು. ಆದರೆ, ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿ ಕುಂಠಿತಗೊಂಡಿದ್ದು, ಯಾವ ಕಾಮಗಾರಿಗೂ ಅನುದಾನ ಇಲ್ಲದಂತಾಗಿದೆ. ಇದರೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸದಂತೆ ಆ ಪಕ್ಷದ ಶಾಸಕರೇ ರಾಜ್ಯ ಸರ್ಕಾರದ ಮೇಲೆ ಒತ್ತಡ ತರುತ್ತಿದ್ದಾರೆ’ ಎಂದರು.

Join Whatsapp